ಮೇಲ್ವರ್ಗದ ಬಡವರಿಗೆ ಶೇ. 10 ರಷ್ಟು ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಮಂಡನೆ
ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆಯಲ್ಲಿಂದು ಮಂಡನೆಯಾಯಿತು.

ನವದೆಹಲಿ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆಯಲ್ಲಿಂದು ಮಂಡನೆಯಾಯಿತು.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಥಾವರ್ ಚಂದ್ ಗೆಹ್ಲೋಟ್ ಈ ಮಸೂದೆಯನ್ನು ಮಂಡಿಸಿದರು. ಸಮಾಜವಾದಿ ಪಕ್ಷದ ತೀವ್ರ ಪ್ರತಿಭಟನೆಯ ನಡುವೆಯೂ ಥಾವರ್ ಚಂದ್ ಗ್ಲೆಹೋಟ್ ಈ ಮಸೂದೆಯನ್ನು ಮಂಡಿಸಿದರು. ಮಸೂದೆ ಮೇಲೆ ಈಗ ಚರ್ಚೆ ಆರಂಭವಾಗಿದೆ.
2019ರ ಲೋಕಸಭಾ ಚುನಾವಣೆಗೆ ಕೇವಲ 100 ದಿನ ಬಾಕಿ ಇರುವಂತೆಯೇ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ, 10 ರಷ್ಟು ಮೀಸಲಾತಿ ಒದಗಿಸುವ ಮಸೂದಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


