ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ
ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ ಭಾರತದ ಪೌರತ್ವ ಒದಗಿಸುವ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ ಭಾರತದ ಪೌರತ್ವ ಒದಗಿಸುವ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.
ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ-2019ರ ಮಂಡಿಸಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ,ಈ ಮಸೂದೆ ಸಂವಿಧಾನದಲ್ಲಿನ ವಿನಾಯಿತಿಗಳಿಗೆ ವಿರುದ್ಧವಾಗಿಲ್ಲ, ಮೂರು ನೆರೆಯ ರಾಷ್ಟ್ರಗಳಲ್ಲಿ ನೋವುಂಡ ಅಲ್ಪಸಂಖ್ಯಾತರಿಗೆ ನೆರವು ನೀಡಲಿದೆ ಎಂದು ಹೇಳಿದರು.
ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದಿಂದ ವಲಸೆ ಬಂದು ಆರು ವರ್ಷಗಳಿಂದ ಭಾರತದಲ್ಲಿ ನೆಲೆಸಿರುವ ಹಿಂದೂಗಳು, ಜೈನರು, ಕ್ರಿಶ್ಚಿಯನ್, ಸಿಖ್, ಬೌದ್ದರು ಹಾಗೂ ಪಾರ್ಸಿಯನ್ನರು ಯಾವುದೇ ದಾಖಲೆ ಹೊಂದಿದ್ದರೂ ಸಹ ಈ ಮಸೂದೆ ಭಾರತದ ಪೌರತ್ವವನ್ನು ನೀಡಲಿದೆ ಎಂದರು.
ಭಾರತ ಹೊರತುಪಡಿಸಿದರೆ ಬೇರೆಡೆಗೆ ಹೋಗಲು ಅವರಿಗೆ ಅವಕಾಶ ಇಲ್ಲ. ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಸೇರಿದಂತೆ ಅನೇಕ ನಾಯಕರು ನೆರೆಯ ರಾಷ್ಟ್ರಗಳ ನೊಂದ ಅಲ್ಪಸಂಖ್ಯಾತ ಜನರಿಗೆ ಆಶ್ರಯ ಒದಗಿಸುವ ಮನೋಭಾವ ಹೊಂದಿದ್ದರು ಎಂದು ರಾಜನಾಥ್ ಸಿಂಗ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


