ಆರ್ಬಿಐ 'ಡಿಜಿಟಲ್ ಪಾವತಿ' ವಿಶೇಷ ಸಮಿತಿಯ ಅಧ್ಯಕ್ಷರಾಗಿ ನಂದನ್ ನಿಲೇಕಣಿ ನೇಮಕ!
ಆಧಾರ್ ಯೋಜನೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಂದನ್ ನಿಲೇಕಣಿ ಅವರನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Published On :
ಮುಂಬೈ: ಆಧಾರ್ ಯೋಜನೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಂದನ್ ನಿಲೇಕಣಿ ಅವರನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, ಡಿಜಿಟಲ್ ಪಾವತಿಯ ಭದ್ರತೆ ಬಗ್ಗೆ ಈ ವಿಶೇಷ ಸಮಿತಿ ಆಳವಾಗಿ ಅಧ್ಯಯನ ಮಾಡಲಿದೆ. ಡಿಜಿಟಲ್ ಪಾವತಿ ಕುರಿತಂತೆ ಸಲಹೆ ಸೂಚನೆಗಳನ್ನು ಈ ಸಮಿತಿ ನೀಡಲಿದೆ.
ಈ ವಿಶೇಷ ಸಮಿತಿಯಲ್ಲಿ ನಾಲ್ವರು ಸದಸ್ಯರಿರಲಿದ್ದಾರೆ. ಸಮಿತಿಯ ಸದಸ್ಯರಾಗಿ ಎಚ್ ಆರ್ ಖಾನ್, ಕಿಶೋರ್ ಸಾಂಸಿ, ಅರುಣಾ ಶರ್ಮಾ, ಸಂಜಯ್ ಜೈನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


