ಬಿಜೆಡಿ ಮಹಾಘಟಬಂಧನ್ ಸೇರುವ ಪ್ರಶ್ನೆಯೇ ಇಲ್ಲ: ಒಡಿಶಾ ಸಿಎಂ ನವೀನ್ ಪಟ್ನಾಯಕ್
ಬಿಜು ಜನತಾ ದಳ (ಬಿಜೆಡಿ) ಮುಬರುವ ಲೋಕಸಭಾ ಚುನಾವಣೆಗೆ ಮುನ್ನ ರಚನೆಯಾಗಲಿದೆ ಎನ್ನಲಾದ ಮಹಾಘಟಬಂಧನ್(ಬಿಜೆಪಿ ವಿರೋಧಿ ಪಕ್ಷಗಳ ಮಹಾಮೈತ್ರಿ)ಯ ಭಾಗವಾಗಿರುವುದಿಲ್ಲ ಎಂದು....

Published On :
ಭುವನೇಶ್ವರ್: ಬಿಜು ಜನತಾ ದಳ (ಬಿಜೆಡಿ) ಮುಬರುವ ಲೋಕಸಭಾ ಚುನಾವಣೆಗೆ ಮುನ್ನ ರಚನೆಯಾಗಲಿದೆ ಎನ್ನಲಾದ ಮಹಾಘಟಬಂಧನ್(ಬಿಜೆಪಿ ವಿರೋಧಿ ಪಕ್ಷಗಳ ಮಹಾಮೈತ್ರಿ)ಯ ಭಾಗವಾಗಿರುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಹೇಳಿದ್ದಾರೆ.
ತಮ್ಮ ಪಕ್ಷವು ಭಾರತೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಿಂಡ ಸಮಾನ ಅಂತರ ಕಾಯ್ದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ."ನಾವು ಮಹಾಘಟಬಂಧನ್ ನ ಭಾಗವಾಗುವುದಿಲ್ಲ, ನಮ್ಮ ಮೂಲ ತತ್ವಕ್ಕೆ ನಾವು ಬದ್ದವಾಗಿದ್ದು ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲಿದ್ದೇವೆ" ಎಂದು ಪಟ್ನಾಯಕ್ ಭುವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಮುನ್ನ ಮಂಗಳವಾರ ಮಾದ್ಯಮದೆದುರು ಮಾತನಾಡಿದ್ದ ಪಟ್ನಾಯಕ್ ಲೋಕಸಭೆ ಚುನಾವಣೆಗೆ ಮುನ್ನ ಮಹಾಘಟಬಂಧನ್ ಗೆ ಸೇರ್ಪಡೆಯಾಗುವ ಕುರಿತು ನಿರ್ಧರಿಸಲು ನಮಗೆ ಇನ್ನೂ ಸಾಕಷ್ಟು ಸಮಯ ಬೇಕು ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


