ಬಿಜೆಪಿ ಮಹಿಳಾ ವಿರೋಧಿ ಸರ್ಕಾರ ನಡೆಸುತ್ತಿದೆ: ಕಾಂಗ್ರೆಸ್ ಮಹಿಳಾ ಪ್ರ.ಕಾರ್ಯದರ್ಶಿ ತೃತೀಯ ಲಿಂಗಿ ಅಪ್ಸರಾ ರೆಡ್ಡಿ
ಕಳೆದ ಐದು ವರ್ಷಗಳಿಂದ ಕೇಂದ್ರದ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಮಹಿಳಾ ವಿರೋಧಿ ಸರ್ಕಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ತೃತೀಯ ಲಿಂಗಿ ಅಪ್ಸರಾ ರೆಡ್ಡಿಯವರು ಮಂಗಳವಾರ ಹೇಳಿದ್ದಾರೆ...

Published On :
ನವದೆಹಲಿ: ಕಳೆದ ಐದು ವರ್ಷಗಳಿಂದ ಕೇಂದ್ರದ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಮಹಿಳಾ ವಿರೋಧಿ ಸರ್ಕಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ತೃತೀಯ ಲಿಂಗಿ ಅಪ್ಸರಾ ರೆಡ್ಡಿಯವರು ಮಂಗಳವಾರ ಹೇಳಿದ್ದಾರೆ.
ಮಾಜಿ ಪತ್ರಕರ್ತೆ, ತೃತೀಯ ಲಿಂಗಿ ಅಪ್ಲರಾ ರೆಡ್ಡಿಯವರನ್ನು ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿರುವ ಅಪ್ಸರಾ ರೆಡ್ಡಿಯವರು, ಕಳೆದ ಐದು ವರ್ಶಗಳಲ್ಲಿ ಬಿಜೆಪಿ ದೇಶದಲ್ಲಿರುವ ಬಹುದೊಡ್ಡ ಸಂಖ್ಯೆಯಲ್ಲಿರುವ ಮಹಿಳೆಯರನ್ನು ನಿರ್ಲಕ್ಷಿಸುತ್ತಿದೆ. ನಾನು ಲಿಂಗ ನ್ಯಾಯದ ಮೇಲೆ ನಂಬಿಕೆಯಿಟ್ಟಿದ್ದೇನೆ. ಕಳೆದ ಐದು ವರ್ಷಗಳಿಂದ ದೇಶದಲ್ಲಿ ಮಹಿಳೆಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಭಾವನೆ ನನ್ನಲ್ಲಿ ಮೂಡಿದೆ. ಬಿಜೆಪಿ ನೇತೃತ್ವದ ಸರ್ಕಾರ ಮಹಿಳಾ ವಿರೋಧಿ ಸರ್ಕಾರವನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.
ರಾಜಕೀಯವನ್ನು ಬದಿಗೊತ್ತಿ ತೃತೀಯ ಲಿಂಗಿಗಳ ಸಮುದಾಯವನ್ನು ಒಪ್ಪಿಕೊಳ್ಳುವ ಅಗತ್ಯವಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.
ತೃತೀಯ ಲಿಂಗಿ ಹೋರಾಟಗಾರ ಕಲ್ಕಿ ಸುಬ್ರಮಣಿಯಮ್ ಅವರು ಮಾತನಾಡಿ, ತೃತೀಯ ಲಿಂಗಿಗಳು ರಾಜಕೀಯ ಪ್ರವೇಶ ಮಾಡುತ್ತಿರುವುದು ಸ್ವಾಗತಾರ್ಹ. ಈ ರೀತಿಯ ಬೆಳವಣಿಗೆಗಳು ಭವಿಷ್ಯದಲ್ಲಿ ನಮ್ಮ ಸಮುದಾಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಲಿದೆ. ಒಂದು ಸಮುದಾಯ ಅಭಿವೃದ್ಧಿಗೊಳ್ಳಲು ರಾಜಕೀಯ ಪ್ರೇರಣೆ ಅತ್ಯಂತ ಮುಖ್ಯವಾದದ್ದು ಎಂದು ಹೇಳಿದ್ದಾರೆ.
ರಾಜಕೀಯ ಪ್ರವೇಶದಿಂದ ಸಮುದಾಯ ರಾಷ್ಟ್ರೀಯ ಮಟ್ಟದಲ್ಲಿ ದನಿಯೆತ್ತಲು ಸಹಾಯಕವಾಗಲಿದೆ. ಆದರೆ, ರಾಜಕೀಯ ಪ್ರವೇಶಿಸುವವರು ಸಮುದಾಯವನ್ನು ಮೇಲೆತ್ತಲು ಬುಡದಿಂದ ಕಾರ್ಯನಿರ್ವಹಿಸಬೇಕು. ಲಿಂಗ ಆಧಾರಿತ ಅಲ್ಪಸಂಖ್ಯಾತ ಗುಂಪುಗಳು ರಾಜಕೀಯ ಪಕ್ಷಗಳಲ್ಲಿ ಪಾಲ್ಗೊಳ್ಳಬೇಕು ಎಂದು ಮತ್ತೊಬ್ಬ ಹೋರಾಟಗಾರ್ತಿ ಸೌಮ್ಯಾ ಗುಪ್ತಾ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Apsara ReddyTransgender activistCongress women wing general secretaryಅಪ್ಸರಾ ರೆಡ್ಡಿತೃತೀಯ ಲಿಂಗಿ ಹೋರಾಟಗಾರೆಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


