ಜ.31ರಿಂದ ಸಂಸತ್ ಅಧಿವೇಶನ: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ...

Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಬಜೆಟ್ ಮಂಡನೆ ಕುರಿತ ನಿರ್ಣಯವನ್ನು ಸಂಸದೀಯ ವ್ಯವಹಾರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ಜನವರಿ 31 ರಿಂದ ಫೆಬ್ರವರಿ 13ರವರೆಗೆ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ. ಫೆಬ್ರವರಿ 1 ರಂದು ಜೇಟ್ಲಿಯವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ.
ಅರುಣ್ ಜೇಟ್ಲಿಯವರು ಮಂಡನೆ ಮಾಡುತ್ತಿರುವ 6ನೇ ಬಜೆಟ್ ಇದಾಗಿದ್ದು, ಲೋಕಸಭಾ ಚುನಾವಣೆ ಹತ್ತಿರ ಇರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಭಾರೀ ನಿರೀಕ್ಷೆಗಳನ್ನು ಮೂಡಿಸಿದೆ.
ಹಣಕಾಸು ಸಚಿವಾಲಯ ಬಜೆಟ್ ಭಾಷಣಕ್ಕಾಗಿ ಈಗಾಗಲೇ ವಿವಿಧ ಸಚಿವಾಲಯಗಳಿಂದ ಅಭಿಪ್ರಾಯಗಳನ್ನು ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿParliamentFinance Ministerಹಣಕಾಸು ಸಚಿವBudget Sessionಬಜೆಟ್ ಅಧಿವೇಶನಸಂಸತ್ತುinterim Budgetಮಧ್ಯಂತರ ಬಜೆಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


