ರಾಜ್ಯಸಭೆಯಲ್ಲೂ ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ ಮಸೂದೆ ಅಂಗೀಕಾರ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬಡವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ....

Published On :
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬಡವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಬುಧವಾರ ರಾಜ್ಯಸಭೆಯಲ್ಲೂ ಅಂಗೀಕರಿಸಲಾಗಿದೆ.
ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಲಾಗಿತ್ತು.
ರಾಜ್ಯಸಭೆಯಲ್ಲಿ ಮೀಸಲಾತಿ ಮಸೂದೆ ಕುರಿತು ತೀವ್ರ ಚರ್ಚೆಯ ನಂತರ ವಿಧೇಯಕವನ್ನು ಮತಕ್ಕೆ ಹಾಕಲಾಯಿತು. ವಿಧೇಯಕದ ಪರವಾಗಿ 165 ಹಾಗೂ ವಿಧೇಯಕ ವಿರುದ್ಧವಾಗಿ ಕೇವಲ 7 ಮತ ಬಿದ್ದಿವೆ.
ಇದಕ್ಕು ಮುನ್ನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ಈ ಮಸೂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರಿಯಲ್ಲಿ ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ ಒದಗಿಸಲಿದೆ ಎಂದು ಸದನಕ್ಕೆ ತಿಳಿಸಿದ್ದರು.
ಲೋಕಸಭೆ ಮತ್ತು ರಾಜ್ಯಸಭೆಯಲ್ಲೂ ಈ ವಿಧೇಯಕ ಅಂಗೀಕಾರಗೊಂಡಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಕಾನೂನು ನೀತಿಯಾಗಿ ರೂಪುಗೊಳ್ಳಲಿದೆ. ಈ ಮೂಲಕ ಮೇಲ್ವರ್ಗದ ಬಡವರಿಗೂ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ದೊರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


