ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿಯಾದ ನಟ ಪ್ರಕಾಶ್ ರೈ, ಗರಿಗೆದರಿದ ಕುತೂಹಲ!
ಜಸ್ಟ್ ಆ್ಯಸ್ಕಿಂಗ್ ಪ್ರಕಾಶ್ ರೈ ಅವರು ಇತ್ತೀಚೆಗಷ್ಟೇ ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ನಿರೀಕ್ಷೆ ಹೆಚ್ಚಿಸಿದ್ದರು. ಇದೀಗ ಆಮ್ ಆದ್ಮಿ ಪಕ್ಷದ...

Published On :
ನವದೆಹಲಿ: ಜಸ್ಟ್ ಆ್ಯಸ್ಕಿಂಗ್ ಪ್ರಕಾಶ್ ರೈ ಅವರು ಇತ್ತೀಚೆಗಷ್ಟೇ ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ನಿರೀಕ್ಷೆ ಹೆಚ್ಚಿಸಿದ್ದರು. ಇದೀಗ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಹೇಳಿದ್ದು ಇದರ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ರನ್ನು ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿರುವ ಪ್ರಕಾಶ್ ರೈ ಈ ಕುರಿತು ಕೇಜ್ರಿವಾಲ್ ಅವರ ಜತೆ ಮಾತುಕತೆ ನಡೆಸಿದ್ದಾರೆ.
ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಪ್ರಕಾಶ್ ರೈ ಭೇಟಿಯಾಗಿ ಹಲವು ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ಆಪ್ ಪಕ್ಷ ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


