ಉದ್ಯೋಗಗಳು ಏಲ್ಲಿವೆ? ಮೇಲ್ವರ್ಗದವರಿಗೆ ಶೇ.10 ಮೀಸಲಾತಿ ಬಗ್ಗೆ ಶಿವಸೇನೆ ಪ್ರಶ್ನೆ
ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಮಾರನೇ ದಿನವೇ ಉದ್ಯೋಗಗಳು ಏಲ್ಲಿವೆ ಎಂದು ಎನ್ ಡಿಎ ಅಂಗಪಕ್ಷ ಶಿವಸೇನೆ ಪ್ರಶ್ನಿಸಿದೆ.

Published On :
ಮುಂಬೈ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಮಾರನೇ ದಿನವೇ ಉದ್ಯೋಗಗಳು ಏಲ್ಲಿವೆ ಎಂದು ಎನ್ ಡಿಎ ಅಂಗಪಕ್ಷ ಶಿವಸೇನೆ ಪ್ರಶ್ನಿಸಿದೆ.
ಅಲ್ಲದೇ ಇದು ಕೇವಲ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಬಾರದು, ಹಾಗೇನಾದರೂ ಆದಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ದೇಶದಲ್ಲಿ ಉದ್ಯೋಗ ಪ್ರಮಾಣವನ್ನು ಸಮಪ್ರಮಾಣದಲ್ಲಿ ಕೊಂಡೊಯ್ಯಲು ಪ್ರತಿವರ್ಷ 80 ರಿಂದ 90 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕಾದ ಅಗತ್ಯವಿದೆ. ಆದರೆ. ಇಂದಿನ ಪರಿಸ್ಥಿತಿಯಲ್ಲಿ ಆ ಲೆಕ್ಕಾಚಾರವೂ ಸುರಕ್ಷಿತವಾಗಿಲ್ಲ ಎಂದು ಉದ್ದವ್ ಠಾಕ್ರೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


