ದೇಶ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹಿಮ್ ಅಪರಾಧಿ

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣಕ್ಕೆ ಸಂಬಂಧ ಸ್ವಯಂಘೋಷಿತ ದೇವಮಾನವ ಗುರ್ಮಿತ್ ಕಾಮ್ ರಹೀಂ ಬಾಬಾ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹಿಮ್ ಅಪರಾಧಿ
ಗುರ್ಮೀತ್ ರಾಮ್ ರಹಿಮ್
Published On :
ಪಂಚಕುಲ: ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣಕ್ಕೆ ಸಂಬಂಧ ಸ್ವಯಂಘೋಷಿತ ದೇವಮಾನವ ಗುರ್ಮಿತ್ ಕಾಮ್ ರಹೀಂ ಬಾಬಾ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. 
ಛತ್ರಪತಿ 2002ರಲ್ಲಿ ತಮ್ಮ ಪತ್ರಿಕೆಯಲ್ಲಿ ಪೂರಾ ಸಚ್ಚ ಎಂಬ ವರದಿ ಪ್ರಕಟಿಸಿದ್ದು ಅದರಲ್ಲಿ ಗುರ್ಮಿತ್ ಅವರು ಸಿರ್ಸಾದ ಡೇರಾ ಪ್ರಧಾನ ಕಚೇರಿಯಲ್ಲಿ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬ ಬಿತ್ತರಿಸಿದ್ದರು. ಈ ವರದಿ ಪ್ರಕಟವಾದ ಬೆನ್ನಲ್ಲೇ ಛತ್ರಪತಿ ಅವರನ್ನು ಗುಂಡಿಟ್ಟು ಕೊಲ್ಲಲಾಗಿತ್ತು. 
ವಿಚಾರಣೆ ವೇಳೆ ಆರೋಪ ಸಾಬೀತಾಗಿದ್ದರಿಂದ ಪಂಚಕುಲ ಸಿಬಿಐನ ವಿಶೇಷ ಕೋರ್ಟ್ ಗುರ್ಮಿತ್ ಸೇರಿದಂತೆ ನಾಲ್ವರು ದೋಷಿ ಎಂದು ತೀರ್ಪು ನೀಡಿದ್ದು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಜನವರಿ 17ರಂದು ಘೋಷಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.