ಸರ್ಕಾರಿ ಅಧಿಕಾರಿಗೆ 60 ಲಕ್ಷ ರು.ವಂಚನೆ: ಖ್ಯಾತ ಗಾಯಕಿ ಬಂಧನ
ಸರ್ಕಾರಿ ಅಧಿಕಾರಿಗೆ ಲಕ್ಷಾಂತರ ರು ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮೂಲದ ಗಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ....

Published On :
ನವದೆಹಲಿ: ಸರ್ಕಾರಿ ಅಧಿಕಾರಿಗೆ ಲಕ್ಷಾಂತರ ರು ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮೂಲದ ಗಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ.
2016ರಲ್ಲಿ ನೋಟು ಅಮಾನ್ಯೀಕರಣವಾದ ಸಂದರ್ಭದಲ್ಲಿ ಒಟ್ಟು 60 ಲಕ್ಷ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕಿ ಶಿಖಾ ರಾಘವ್ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಳೆದ 2 ವರ್ಷಗಳಿಂದಲೂ ಕೂಡ ಈಕೆಯ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಿ, ಕೊನೆಗೂ ಅರೆಸ್ಟ್ ಮಾಡಲಾಗಿದೆ. ಹರ್ಯಾಣದಲ್ಲಿ ಆಕೆ ನೆಲೆಸಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತೆರಳಿದ ಪೊಲೀಸರು ಆಕೆಯನ್ನು ಬಂಧಿಸಿ ದೆಹಲಿಗೆ ಕರೆತರಲಾಗಿದೆ ಎಂದು ಡಿಸಿಪಿ ನೂಪುರ್ ಪ್ರಸಾದ್ ಹೇಳಿದ್ದಾರೆ.
ಅಲ್ಲದೇ ಆಕೆಯನ್ನು ವಿಚಾರಣೆಗೆ ಒಳಪಡಿಸಲಾಗಿದೆ, ಆದರೆ ಆಕೆಯಿಂದ ಯಾವುದೇ ಹಣ ವಶ ಪಡಿಸಿಕೊಂಡಿಲ್ಲ, ಶಿಖಾ ದೆಹಲಿ ಸೇರಿದಂತೆ ಹಲವು ಸ್ಥಳಗಳಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಹಲವು ಸಮಾರಂಭಗಳಲ್ಲಿ ಭಾಗವಹಿಸಿ ಹಾಡು ಹಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರ ಬಳಿಯಿಂದ ಅಮಾನ್ಯೀಕರಣಗೊಂಡ ನೋಟು ಪಡೆದು ಅದನ್ನು ಬದಲಿಸಿಕೊಡುವುದಾಗಿ ಹೇಳಿ ವಂಚಿಸಿದ್ದಾಳೆ ಎಂದು ಅಧಿಕಾರಿಯ ಕುಟುಂಬಸ್ಥರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


