ದೇಶ

ಮೇವು ಹಗರಣ: ಲಾಲು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಜಾಮೀನು....

ಮೇವು ಹಗರಣ: ಲಾಲು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಲಾಲು ಪ್ರಸಾದ್ ಯಾದವ್
Published On :
ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಮೇವು ಹಗರಣದ ಇತರೆ ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ಇಂದು ವಜಾಗೊಳಿಸಿದ್ದಾರೆ.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಜನವರಿ ನಾಲ್ಕರಂದು ಲಾಲು ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತ್ತು. ಲಾಲು ಪರವಾಗಿ ಕಪಿಲ್ ಸಿಬಾಲ್ ವಾದ ಮಂಡಿಸಿದ್ದರು. ಸಿಬಿಐ ಪರವಾಗಿ ವಕೀಲ ರಾಜೀವ್ ಸಿನ್ಹಾ ವಾದಿಸಿದ್ದರು.
ಮೇವು ಹಗರಣದ ಎರಡನೇ ಪ್ರಕರಣದಲ್ಲಿ ಮೂರುವರೆ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಲಾಲು ಪ್ರಸಾದ್ ಯಾದವ್ ಅವರು  ಅನಾರೋಗ್ಯದ ಕಾರಣದಿಂದ ಪ್ರಸ್ತುತ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.