ಅರವಿಂದ್ ಕೇಜ್ರಿವಾಲ್ ಪುತ್ರಿ ಅಪಹರಣಕ್ಕೆ ಬೆದರಿಕೆ ಪತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಪತ್ರ ಅಪರಿಚಿತರಿಂದ ಕೇಜ್ರಿವಾಲ್ ಕಚೇರಿಗೆ ಬಂದಿರುವ ಇ- ಮೇಲ್ ನಲ್ಲಿ ಅವರ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಲಾಗಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಪತ್ರ ಅಪರಿಚಿತರಿಂದ ಕೇಜ್ರಿವಾಲ್ ಕಚೇರಿಗೆ ಬಂದಿರುವ ಇ- ಮೇಲ್ ನಲ್ಲಿ ಅವರ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಜನವರಿ 9 ರಂದು ಬಂದಿರುವ ಬೆದರಿಕೆ ಇ- ಮೇಲ್ ನನ್ನು ದೆಹಲಿಯ ಪೊಲೀಸ್ ಆಯುಕ್ತ ಅಮೂಲ್ಯ ಪಾಟ್ನಯಕ್ ಅವರಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆದರಿಕೆ ಇ- ಬಂದಿರುವುದನ್ನು ದೆಹಲಿ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು, ಅದನ್ನು ಸೈಬರ್ ವಿಭಾಗದ ವಿಶೇಷ ಘಟಕ್ಕೆ ವರ್ಗಾಯಿಸಲಾಗಿದೆ. ಯಾವ ಇ- ಮೇಲ್ ಖಾತೆಯಿಂದ ಈ ಕರೆ ಬಂದಿದೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಉತ್ತರ ಜಿಲ್ಲೆಯ ಪೊಲೀಸರಿಂದ ಕೇಜ್ರಿವಾಲ್ ಮಗಳಿಗೆ ಭದ್ರತೆ ಒದಗಿಸಲಾಗಿದೆ.
ಮೂರು ದಿನಗಳ ಹಿಂದೆಯೇ ದೆಹಲಿ ಸರ್ಕಾರ ಬೆದರಿಕೆಯ ಇ- ಮೇಲ್ ನ್ನು ಪೊಲೀಸ್ ಆಯುಕ್ತರಿಗೆ ವರ್ಗಾಯಿಸಿರುವುದಾಗಿ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರಿಂದ ಈವರೆಗೂ ಯಾವುದೇ ಮಾಹಿತಿ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


