ಅಕ್ರಮ ಗಣಿಗಾರಿಕೆ ಕೇಸಿನಲ್ಲಿ ಅಖಿಲೇಶ್ ಯಾದವ್ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿ ವರ್ಗ
ಅಕ್ರಮ ಮರಳು ಮತ್ತು ಗಣಿಗಾರಿಕೆ ಹಗರಣದಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ...

ನವದೆಹಲಿ: ಅಕ್ರಮ ಮರಳು ಮತ್ತು ಗಣಿಗಾರಿಕೆ ಹಗರಣದಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪಾತ್ರದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿ ಡಿಐಜಿ ಗಗನ್ ದೀಪ್ ಗಂಭೀರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಕ್ರಮ ಮರಳು ಮತ್ತು ಗಣಿಗಾರಿಕೆ ಹಗರಣದಲ್ಲಿ ಅಖಿಲೇಶ್ ಯಾದವ್ ಮತ್ತು ಇತರ ಅಧಿಕಾರಿಗಳ ಪಾತ್ರದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿ ಗಂಭೀರ್ ಅವರನ್ನು ವಿಶೇಷ ಅಪರಾಧ ಘಟಕದಿಂದ ಭ್ರಷ್ಟಾಚಾರ ವಿರೋಧಿ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.
ಸಿಬಿಐಯ ಉಪ ನಿರ್ದೇಶಕರಾಗಿದ್ದ ಅನೀಶ್ ಪ್ರಸಾದ್ ಇನ್ನು ಮುಂದೆ ಅಕ್ರಮ ಗಣಿಗಾರಿಕೆ ಕೇಸಿನ ವಿಚಾರಣೆ ನಡೆಸಲಿದ್ದಾರೆ. ಗಗನ್ ದೀಪ್ ಗಂಭೀರ್ ಅವರು ವರ್ಗಾವಣೆಯಾಗಿರುವ ಭ್ರಷ್ಟಾಚಾರ ನಿಗ್ರಹ ಘಟಕ ಬಿಹಾರದ ಸೃಜನ್ ಹಗರಣ ಮತ್ತು ಪತ್ರಕರ್ತ ಉಪೇಂದ್ರ ರೈಯವರ ಕೇಸಿನ ವಿಚಾರಣೆ ನಡೆಸುತ್ತಿದ್ದಾರೆ.
ಹಮಿರ್ ಪುರದ ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟಂತೆ ನಿನ್ನೆ ಉತ್ತರ ಪ್ರದೇಶ ಮತ್ತು ದೆಹಲಿಯ 12 ಕಡೆಗಳಲ್ಲಿ ಸಿಬಿಐ ಶೋಧಕಾರ್ಯ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


