ಹೆಣ್ಣುಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಜಾಧವ್ ಪುರ ವಿವಿ ಪ್ರೊಫೆಸರ್ ಕರ್ತವ್ಯ ನಿರ್ವಹಣೆಗೆ ನಿರ್ಬಂಧ
ಯುವತಿಯರ ಕನ್ಯತ್ವದ ಬಗ್ಗೆ ಫೇಸ್‍ಬುಕ್‍ನಲ್ಲಿ ಅಶ್ಲೀಲವಾಗಿ ಪೋಸ್ಟ್ ಮಾಡುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಜಾಧವ್ ಪುರ ವಿವಿಯ ಪ್ರೊಫೆಸರ್ ನ್ನು ಕರ್ತವ್ಯ ನಿರ್ವಹಣೆಯಿಂದ ತೆಗೆದುಹಾಕಲಾಗಿದೆ.

Published On :
ಕೋಲ್ಕತ್ತಾ: ಯುವತಿಯರ ಕನ್ಯತ್ವದ ಬಗ್ಗೆ ಫೇಸ್‍ಬುಕ್‍ನಲ್ಲಿ ಅಶ್ಲೀಲವಾಗಿ ಪೋಸ್ಟ್ ಮಾಡುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಜಾಧವ್ ಪುರ ವಿವಿಯ ಪ್ರೊಫೆಸರ್ ನ್ನು ಕರ್ತವ್ಯ ನಿರ್ವಹಣೆಯಿಂದ ತೆಗೆದುಹಾಕಲಾಗಿದೆ.
ವಿವಿಯ ಸ್ಟೂಡೆಂಟ್-ಟೀಚರ್ ಸಮಿತಿಯಿಂದ ತಕ್ಷಣವೇ ಜಾರಿಗೆ ಬರುವಂತೆ ಪ್ರೊಫೆಸರ್ ಕರ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ವಿವಿಯ ಹೇಳಿಕೆ ತಿಳಿಸಿದ್ದು ಕ್ಯಾಂಪಸ್ ಒಳಗೆ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಯುವತಿಯರ ಕನ್ಯತ್ವವನ್ನು ತಂಪು ಪಾನೀಯಕ್ಕೆ ಹೋಲಿಸಿದ್ದ ಪ್ರೊಫೆಸರ್, ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ ಎಂದು ಪ್ರಶ್ನಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿದ್ದರು. ತಕ್ಷಣವೇ ಅದನ್ನು ಡಿಲೀಟ್ ಮಾಡಿದ್ದರಾದರೂ ಅದರ ಸ್ಕ್ರೀನ್ ಶಾಟ್ ವೈರಲ್ ಆಗಿತ್ತು.
ಪ್ರೊಫೆಸರ್ ಫೇಸ್ ಬುಕ್ ಪೋಸ್ಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಜಾಧವ್ ಪುರ ವಿವಿ ಉಪಕುಲಪತಿ ಸುರಂಜನ್ ದಾಸ್, "ಅವರೊಬ್ಬ ಪ್ರೊಫೆಸರ್, ಅವರ ಫೇಸ್ ಬುಕ್ ಪೋಸ್ಟ್ ವಿವಿಯ ಘನತೆಯನ್ನು ಕುಗ್ಗಿಸಿದೆ. ನಿಯಮಗಳ ಪ್ರಕರ ಪ್ರೊಫೆಸರ್ ಕನಕ್ ಸರ್ಕಾರ್ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿವಾದಾತ್ಮಕ ಹೇಳಿಕೆcontroversial remarkKanak SarkarJadavpur University Professorಜಾಧವ್ ಪುರ ವಿವಿಪ್ರೊಫೆಸರ್ ಕನಕ್ ಸರ್ಕಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


