ದೇಶ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಡಿರುವ ವೆಚ್ಚ 122 ಕೋಟಿ ರೂ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 122 ಕೋಟಿ ರೂಪಾಯಿ ಹಾಗೂ ಈಶಾನ್ಯ ರಾಜ್ಯಗಳಲ್ಲಿ ...

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಡಿರುವ ವೆಚ್ಚ 122 ಕೋಟಿ ರೂ.
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 122 ಕೋಟಿ ರೂಪಾಯಿ ಹಾಗೂ ಈಶಾನ್ಯ ರಾಜ್ಯಗಳಲ್ಲಿ 14 ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂದು ಪಕ್ಷ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಚುನಾವಣಾ ಖರ್ಚುವೆಚ್ಚ ವಿವರಗಳಿಂದ ತಿಳಿದುಬಂದಿದೆ.

ನಾಲ್ಕು ರಾಜ್ಯಗಳಲ್ಲಿನ ಚುನಾವಣಾ ವೆಚ್ಚಗಳ ಬಗ್ಗೆ ಬಿಜೆಪಿ ಇತ್ತೀಚೆಗೆ ವಿವರ ಸಲ್ಲಿಸಿದ್ದು ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಗೆ 122.68 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಹೇಳಿದೆ. ಚುನಾವಣೆ ಫಲಿತಾಂಶದ ನಂತರದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚಿಸಿತ್ತು.

ಇದೇ ವರದಿಯಲ್ಲಿ ಬಿಜೆಪಿಯು ಅದರ ಕೇಂದ್ರ ಕಚೇರಿ ಮತ್ತು ರಾಜ್ಯ ಘಟಕಗಳು ಮಾಡಿರುವ ವೆಚ್ಚದ ಬಗ್ಗೆ ಕೂಡ ವಿವರ ನೀಡಿದ್ದು ಅದರಲ್ಲಿ ಈಶಾನ್ಯ ರಾಜ್ಯಗಳಾದ ಮೇಘಾಲಯ, ತ್ರಿಪುರಾ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯ ವೆಚ್ಚಗಳ ಬಗ್ಗೆ ಸಹ ವಿವರ ಸಲ್ಲಿಸಿದೆ. ಕಳೆದ ವರ್ಷ ಈ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ 14.18 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಬಿಜೆಪಿ ಹೇಳಿದೆ.

ಮೇಘಾಲಯದಲ್ಲಿ ಬಿಜೆಪಿ ಚುನಾವಣೆಗೆ 3.8 ಕೋಟಿ, ತ್ರಿಪುರಾದಲ್ಲಿ 6.96 ಕೋಟಿ ರೂ ಮತ್ತು ನಾಗಾಲ್ಯಾಂಡ್ ನಲ್ಲಿ 3.36 ಕೋಟಿ ರೂಪಾಯಿ ಖರ್ಚು ಮಾಡಿದೆ.

ಪ್ರಚಾರಕರು, ಮಾಧ್ಯಮ, ಪ್ರಚಾರ, ಮೆರವಣಿಗೆ, ಹೆಲಿಕಾಪ್ಟರ್ ಮತ್ತು ರಸ್ತೆ ಪ್ರಯಾಣ, ಚುನಾವಣಾ ಸಾಮಗ್ರಿಗಳಿಗೆ ಇಷ್ಟು ವೆಚ್ಚವಾಗಿದೆ ಎಂದು ಬಿಜೆಪಿ ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.