ಎಚ್ಚರ.. ಲೋಕಸಭೆ ಚುನಾವಣೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದರೆ 'ಪೊಲೀಸ್ ಡ್ರಿಲ್'
ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ಕುರಿತಂತೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುಳ್ಳು ಸುದ್ದಿಗಳ ವಿರುದ್ಧ ಕೆಂಗಣ್ಣು ಬೀರಿರುವ ಕೇಂದ್ರ ಚುನಾವಣಾ ಆಯೋಗ ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.

Published On :
ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ಕುರಿತಂತೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುಳ್ಳು ಸುದ್ದಿಗಳ ವಿರುದ್ಧ ಕೆಂಗಣ್ಣು ಬೀರಿರುವ ಕೇಂದ್ರ ಚುನಾವಣಾ ಆಯೋಗ ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.
ಈ ಹಿಂದೆ ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಮೆಸೆಜಿಂಗ್ ತಾಣ ವಾಟ್ಸಪ್ ನಲ್ಲಿ ಲೋಕಸಭೆ ಚುನಾವಣೆ ಕುರಿತು ಸುದ್ದಿಗಳನ್ನು ಹರಿಯ ಬಿಡಲಾಗಿತ್ತು. ಏಪ್ರಿಲ್ ರಿಂದ ಮೇ 17 ರ ಒಳಗೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಲ್ಲದೆ ಲೋಕಸಭೆಯೊಂದಿಗೆ ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ಇನ್ನೂ ಹಲವು ರಾಜ್ಯಗಳ ವಿಧಾನಸಭೆಗೂ ಚುನಾವಣೆ ನಡೆಸಲಾಗುತ್ತದೆ ಎಂದು ಸುದ್ದಿಯಲ್ಲಿ ಹರಿಯಬಿಡಲಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಇದೀಗ ಇಂತಹ ಸುಳ್ಳು ಸುದ್ದಿಗಳ ವಿರುದ್ಧ ಕೆಂಗಣ್ಣು ಬೀರಿರುವ ಚುನಾವಣಾ ಆಯೋಗ ಈ ಸಂಬಂಧ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. ಅಂತೆಯೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ದೆಹಲಿ ಚುನಾವಣಾ ಆಯೋಗದ ಮುಖ್ಯ ಅಧಿಕಾರಿಗಳ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಚುನಾವಣಾ ಆಯೋಗElection Commission of Indiafake newsಸುಳ್ಳು ಸುದ್ದಿಲೋಕಸಭೆ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


