ದೇಶ

'ಮಮತಾ ಬ್ಯಾನರ್ಜಿ ರಾಷ್ಟ್ರನಾಯಕಿ': ಪ್ರಧಾನಿ ಹುದ್ದೆ ಕುರಿತಂತೆ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಅಚ್ಚರಿ ಹೇಳಿಕೆ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಾ ಹೋಗುತ್ತಿದ್ದು, ಈ ಪಟ್ಟಿಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೂ ಕೂಡ ಸೇರ್ಪಡೆಯಾಗಿದ್ದಾರೆ.

'ಮಮತಾ ಬ್ಯಾನರ್ಜಿ ರಾಷ್ಟ್ರನಾಯಕಿ': ಪ್ರಧಾನಿ ಹುದ್ದೆ ಕುರಿತಂತೆ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಅಚ್ಚರಿ ಹೇಳಿಕೆ
ಸಂಗ್ರಹ ಚಿತ್ರ
Published On :
ನವದೆಹಲಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಾ  ಹೋಗುತ್ತಿದ್ದು, ಈ ಪಟ್ಟಿಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೂ ಕೂಡ ಸೇರ್ಪಡೆಯಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಅವರು ಅಚ್ಚರಿ ಹೇಳಿಕೆ ನೀಡಿದ್ದು, ಮಮತಾ ಬ್ಯಾನರ್ಜಿ ಓರ್ವ ರಾಷ್ಟ್ರ ನಾಯಕಿಯಾಗಿದ್ದು, ದೇಶದ ಪ್ರಮುಖ ರಾಷ್ಟ್ರೀಯ ಮುಖಂಡರಾಗಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಪ್ರಧಾನಿ ಅಭ್ಯರ್ಥಿಯನ್ನು ಆಯಾ ಪಕ್ಷಗಳು ಗಳಿಸಿಕೊಂಡ ಸ್ಥಾನಗಳ ಮೇಲೆ ಆಯ್ಕೆಯಾದ ಸಂಸದರು ಮತ್ತು ಪಕ್ಷಗಳ ಮುಖಂಡರು ನಿರ್ಧರಿಸುತ್ತಾರೆ. ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಯ ರೇಸ್ ನಲ್ಲಿರುವುದಕ್ಕೆ ಸೂಕ್ತ ವ್ಯಕ್ತಿ ಎಂದು ಸಿನ್ಹಾ ಅಭಿಪ್ರಾಯ ಪಟ್ಟಿದ್ದಾರೆ.
ಇದೇ ವೇಳೆ ತಾವು ಬಿಜೆಪಿಯ ಪ್ರಮಾಣಿಕ ಕಾರ್ಯಕರ್ತ ಎಂದು ಕರೆದುಕೊಂಡಿರುವ ಸಿನ್ಗಾ, ಈ ಪಕ್ಷದಲ್ಲಿ ಕೇವಲ ಇಬ್ಬರೇ ಇಬ್ಬರು ಸಂಸದರಿದ್ದಾಗ ನಾನು ಪಕ್ಷ ಸೇರಿಕೊಂಡಿದ್ದೆ. ಪಕ್ಷದ ಬಲವರ್ಧನೆಗೆ ನಾನು ಸಾಕಷ್ಟು ಶ್ರಮಿಸಿದ್ದೇನೆ ಎಂದು ಸಿನ್ಹಾ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.