ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ: ವರದಿ
ಕೇಂದ್ರ ಚುನಾವಣಾ ಆಯೋಗ ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಿದೆ....

Published On :
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ.
ಈಗಾಗಲೇ ರಾಜಕೀಯ ಪಕ್ಷಗಳು ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಿದ್ದು, ಚುನಾವಣೆ ಆಯೋಗ, ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಮಾರ್ಚ್ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.
ಪ್ರಸಕ್ತ ಲೋಕಸಭೆಯ ಅವಧಿ ಜೂನ್ 3ರಂದು ಕೊನೆಗೊಳ್ಳಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ಎರಡು ವಾರದಲ್ಲಿ ಲೋಕಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಬಾರಿಯ ಲೋಕಸಭಾ ಚುನಾವಣೆಯ ಜತೆ ಜಮ್ಮು ಮತ್ತು ಕಾಶ್ಮೀರ, ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ಹಾಗೂ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ ಕೂಡ ನಡೆಸುವ ಸಾಧ್ಯತೆ ಇದೆ.
ಜಮ್ಮು ಕಾಶ್ಮೀರ ವಿಧಾನ ಸಭೆಯು ಕಳೆದ 2018ರ ನವೆಂಬರ್‌ನಲ್ಲಿ ವಿಸರ್ಜನೆಗೊಂಡಿರುವುದರಿಂದ ಆರು ತಿಂಗಳ ಒಳಗೆ, ಎಂದರೆ ಮೇ ತಿಂಗಳ ಒಳಗಾಗಿ ಚುನಾವಣೆಯನ್ನು ನಡೆಸುವ ಬಾಧ್ಯತೆ ಕೂಡ ಆಯೋಗದ ಮೇಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


