ಲಡಾಖ್ ನಲ್ಲಿ ಹಿಮಪಾತ: ಐವರು ಸಾವು, ಏಳು ಮಂದಿಗಾಗಿ ಹುಡುಕಾಟ
ಜಮ್ಮು ಮತ್ತು ಕಾಶ್ಮೀರದ ಲಡಾಖ್ ನ ಖರ್ದುಂಗ್ ಲಾದಲ್ಲಿ ಭಾರೀ ಹಿಮಪಾತವಾಗಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ....

Published On :
ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ನ ಖರ್ದುಂಗ್ ಲಾದಲ್ಲಿ ಭಾರೀ ಹಿಮಪಾತವಾಗಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ ಮತ್ತು ಇನ್ನು ಏಳು ಮಂದಿಗಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ.
ಇಂದು ಬೆಳಗ್ಗೆ ಹಿಮ ತುಂಬಿಕೊಳ್ಳಲು 12 ಜನರಿದ್ದ ಒಂದು ಸ್ಕಾರ್ಪಿಯೋ ಮತ್ತು ಎರಡು ಟಿಪ್ಪರ್ ಗಳು ಖರ್ದುಂಗ್ ಲಾ ಕಡೆಗೆ ಹೋಗಿದ್ದವು. ಒಂದು ಟಿಪ್ಪರ್ ನಲ್ಲಿ ಹಿಮ ತುಂಬಲ್ಪಟ್ಟು ಇನ್ನೊಂದರಲ್ಲಿ ತುಂಬುವ ವೇಳೆ ಹಿಮಪಾತವಾಗಿದೆ. ಪರಿಣಾಮವಾಗಿ ಮೂರೂ ವಾಹನಗಳು ಮತ್ತು ಅದರೊಳಗಿದ್ದ 12 ಮಂದಿ ಹಿಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಮತ್ತು ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಹಿಮಪಾತದಲ್ಲಿ ಸಿಲುಕಿದ್ದ ಐವರ ಮೃತ ದೇಹವನ್ನು ಹೊರತೆಗೆಯಲಾಗಿದ್ದು, ಇನ್ನು ಏಳು ಮಂದಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ಬಗ್ಗೆ ಗುರುವಾರವೇ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


