ದೇಶ

ಐತಿಹಾಸಿಕ ರ್ಯಾಲಿ ಬಿಜೆಪಿ ಪಾಲಿನ ಮರಣ ಮೃದಂಗ: ಮಮತಾ ಬ್ಯಾನರ್ಜಿ

ಜನವರಿ 19 ರಂದು ನಡೆಯಲಿರುವ ಮೆಗಾ ರ್ಯಾಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಾಲಿಗೆ 'ಮರಣ ಮೃದಂಗ' ಆಗಲಿದೆ ಎಂದು ಪಶ್ಚಿಮ ಬಂಗಾಳ ...

ಐತಿಹಾಸಿಕ ರ್ಯಾಲಿ ಬಿಜೆಪಿ ಪಾಲಿನ ಮರಣ ಮೃದಂಗ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Published On :
ಕೊಲ್ಕೊತಾ: ಜನವರಿ 19 ರಂದು ನಡೆಯಲಿರುವ ಮೆಗಾ ರ್ಯಾಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಾಲಿಗೆ 'ಮರಣ ಮೃದಂಗ' ಆಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಪ್ರಜಾಸತ್ತಾತ್ಮಕ ಪಕ್ಷಗಳು, ಅದು ಪ್ರಾದೇಶಿಕ ಪಕ್ಷಗಳು ಮುಂದಿನ ಚುನಾವಣೆ ನಂತರ ನಿರ್ಣಾಯಕ ಆಗುತ್ತವೆ ಎಂದು ಕೋಲ್ಕತ್ತಾದಲ್ಲಿ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷವು ಜನವರಿ 19ರಂದು ಬೃಹತ್ ಸಭೆ ಆಯೋಜಿಸಿದ್ದು, ಅದರಲ್ಲಿ ದೇಶದಾದ್ಯಂತ ಇರುವ ಪ್ರಾದೇಶಿಕ ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. 
 ಈ ಸಭೆಯು ಬಿಜೆಪಿ ಪಾಲಿಗೆ ಮರಣ ಮೃದಂಗ ಆಗಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ನೂರಿಪ್ಪತ್ತೈದಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸುವುದಿಲ್ಲ ಎಂದು ಮಮತಾ ಹೇಳಿದ್ದಾರೆ,
ಬ್ರಿಗೇಡ್ ಪರೇಡ್ ಮೈದಾನದಲ್ಲಿ ಸಭೆಗಾಗಿ ನಡೆಯುತ್ತಿರುವ ತಯಾರಿಯನ್ನು ಅವರು ವೀಕ್ಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.