ದೇಶ

ತಮಿಳುನಾಡು: ಮದುವೆಯಾಗಲು ನಿರಾಕರಿಸಿದ ವಿಧವೆ ಮೇಲೆ ಆಸಿಡ್ ಎರಚಿ ಯುವಕ ಆತ್ಮಹತ್ಯೆ!

ಮದುವೆಯಾಗಲು ನಿರಾಕರಿಸಿದ 35 ವರ್ಷದ ವಿಧವೆ ಮೇಲೆ ಆಸಿಡ್ ಎರಚಿ 28 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ತಮಿಳುನಾಡು: ಮದುವೆಯಾಗಲು ನಿರಾಕರಿಸಿದ ವಿಧವೆ ಮೇಲೆ ಆಸಿಡ್ ಎರಚಿ ಯುವಕ ಆತ್ಮಹತ್ಯೆ!
ಸಾಂದರ್ಭಿಕ ಚಿತ್ರ
Published On :

ನಾಗೆರ್ ಕೊಯಲ್:  ಮದುವೆಯಾಗಲು ನಿರಾಕರಿಸಿದ 35 ವರ್ಷದ  ವಿಧವೆ ಮೇಲೆ  ಆಸಿಡ್ ಎರಚಿ 28 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಶೇ, 40 ರಷ್ಟು ಸುಟ್ಟ ಗಾಯಗಳಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಜಾನ್ ಎಂದು ಗುರುತಿಸಲಾಗಿದೆ. ಆದರೆ, ತದನಂತರ ಆತನು ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ತಿರುವತ್ತರ್ ಬಳಿ ವಾಸಿಸುತ್ತಿದ್ದ ಗಿರಿಜಾ (35)  ಪತಿ ಒಂಬತ್ತು ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಟೈಲರ್ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ಗಿರಿಜಾಳನ್ನು ಮದುವೆಯಾಗುವಂತೆ ನೆರೆಮನೆಯಲ್ಲಿ ವಾಸಿಸುತ್ತಿದ್ದ ಜಾನ್ ಪದೇ ಪದೇ  ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತ ಗಿರಿಜಾ ಆತನ ವಿರುದ್ಧ ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಗಿರಿಜಾ ಹಾಗೂ ಜಾನ್ ನಡುವೆ ಜಗಳ ನಡೆದಿದ್ದು,  ಆಕ್ರೋಶಗೊಂಡ ಜಾನ್, ಗಿರಿಜಾಳ ಮುಖದ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಇದನ್ನು ನೋಡಿದ ನೆರೆಹೊರೆಯವರು ಆಕೆಯನ್ನು ಕನ್ಯಾಕುಮಾರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸೇರಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಈ ಮಧ್ಯೆ ವಿಷ ಸೇವಿಸಿದ ಜಾನ್ ನನ್ನು  ಖಾಸಗಿ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ತಿರುವತ್ತರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.