ದೇಶ

ಐಆರ್‌ಸಿಟಿಸಿ ಹಗರಣ: ಲಾಲು ಪ್ರಸಾದ್ ಮದ್ಯಂತರ ಜಾಮೀನು ಅವಧಿ ಜನವರಿ 28ರವರೆಗೆ ವಿಸ್ತರಣೆ

ಐಆರ್‌ಸಿಟಿಸಿ ಹಗರಣಗಳಿಗೆ ಸಂಬಂಧ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜನವರಿ....

ಐಆರ್‌ಸಿಟಿಸಿ ಹಗರಣ:  ಲಾಲು ಪ್ರಸಾದ್   ಮದ್ಯಂತರ ಜಾಮೀನು ಅವಧಿ ಜನವರಿ 28ರವರೆಗೆ ವಿಸ್ತರಣೆ
ಲಾಲು ಪ್ರಸಾದ್
Published On :
ನವದೆಹಲಿ: ಐಆರ್‌ಸಿಟಿಸಿ ಹಗರಣಗಳಿಗೆ ಸಂಬಂಧ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು  ಪ್ರಸಾದ್ ಯಾದವ್ ಅವರಿಗೆ ಜನವರಿ 28ರವರೆಗೆ ಮದ್ಯಂತರ ಜಾಮೀನು ವಿಸ್ತರಣೆ ಮಾಡಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅರುಣ್ ಭರದ್ವಾಜ್ ಲಾಲು ಪತ್ನಿ ರಾಬ್ರಿ ದೇವಿ ಹಾಗೂ ಮಗ ತೇಜಸ್ವಿ ಯಾದವ್ ಅವರ ಜಾಮೀನು ಅವಧಿಯನ್ನು ಸಹ ಜನವರಿ 28ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
ಅಂತೆಯೇ ಅದೇ ದಿನ ಲಾಲು ಹಾಗೂ ಇತರರ ಜಾಮೀನು ಅರ್ಜಿಯ ಕುರಿತಂತೆ ನ್ಯಾಯಾಲಯ ತನ್ನ ತೀರ್ಪನ್ನು ಪ್ರಕಟಿಸಲು ತೀರ್ಮಾನಿಸಿದೆ.
ಐಆರ್‌ಸಿಟಿಸಿ ಗೆ ಸೇರಿದ ಎರಡು ಹೋಟೆಲ್ ಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡುವುದರ ಕುರಿತಂತೆ ಅಕ್ರಮ  ಮಂಜೂರಾತಿ ನೀಡಲಾಗಿದೆ ಎಂದು ಆರೋಪಿಸಿ ಲಾಲು ಪ್ರಸಾದ್ ಹಾಗೂ ಇತರರ ವಿರುದ್ಧ ಸಿಬಿಐ  ಹಾಗೂ ಜಾರಿ ನಿರ್ದೇಶನಾಲಯಗಳು ಪ್ರಕರಣ ದಾಖಲಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.