ಸಿಬಿಐ ಮುಖ್ಯಸ್ಥರ ಆಯ್ಕೆ ಸಂಬಂಧ ಗುರುವಾರ ಪ್ರಧಾನಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ
ಸಿಬಿಐ ಮುಖ್ಯಸ್ಥರ ನೇಮಕ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿ ಸಭೆ ಗುರುವಾರ ನಡೆಯಲಿದ್ದು, ಖಾಲಿ ಇರುವ ಹುದ್ದೆಗೆ ಯಾರನ್ನು ನೇಮಕ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಿದೆ.

ನವದೆಹಲಿ: ಸಿಬಿಐ ಮುಖ್ಯಸ್ಥರ ನೇಮಕ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿ ಸಭೆ ಗುರುವಾರ ನಡೆಯಲಿದ್ದು, ಖಾಲಿ ಇರುವ ಹುದ್ದೆಗೆ ಯಾರನ್ನು ನೇಮಕ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅಥವಾ ಅವರ ನಾಮನಿರ್ದೇಶಿತರು ಮತ್ತು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ 1982ರ ಬ್ಯಾಚಿನ ಹಿರಿಯ ಅಧಿಕಾರಿಗಳಾಗಿರುವ ಜೆಕೆ ಶರ್ಮಾ ಮತ್ತು ಪರ್ಮೀಂದರ್ ರೈ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಆದರೆ, ಸಿಬಿಐನಲ್ಲಿ ಅನುಭವದ ಕೊರತೆ ಇದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.
ಗೃಹ ಸಚಿವಾಲಯ (ಅಂತರಿಕ ಭದ್ರತಾ ವಿಭಾಗದ ) ವಿಶೇಷ ಕಾರ್ಯದರ್ಶಿ ರಿನಾ ಮಿತ್ರಾ ಹೆಸರೂ ಕೂಡಾ ಕೇಳಿಬರುತ್ತಿದೆ. ಸಿಬಿಐನಲ್ಲಿ ಅವರು ಐದು ವರ್ಷ ಸೇವೆ ಸಲ್ಲಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಹೆಚ್ಚಿನ ಅವಧಿ ಅಧಿಕಾರ ನಡೆಸಿದ್ದು, ಗಂಭೀರ ಭ್ರಷ್ಟಾಚಾರ ಪ್ರಕರಣಗಳನ್ನು ನಿರ್ವಹಿಸಿದ್ದಾರೆ.
ಉತ್ತರ ಪ್ರದೇಶ ಕೇಡರ್ ನ 1984ರ ಬ್ಯಾಚಿನ ಜಾವೇದ್ ಅಹ್ಮದ್ ಸಿಬಿಐನಲ್ಲಿ 13 ವರ್ಷ ಸೇವೆ ಸಲ್ಲಿಸಿದ್ದಾರೆ. ರಾಜಸ್ತಾನದ ಮಾಜಿ ಡಿಜಿಪಿ ಓ ಪಿ ಗಾಲ್ಹೋತ್ರಾ, ಸಿಬಿಐನಲ್ಲಿ 11 ವರ್ಷ ಸೇವೆ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


