ದೇಶ

ಸಿದ್ಧಗಂಗಾ ಶ್ರೀ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ, ನಾಳೆ ತುಮಕೂರಿಗೆ ಆಗಮನ

ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು...

ಸಿದ್ಧಗಂಗಾ ಶ್ರೀ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ, ನಾಳೆ ತುಮಕೂರಿಗೆ ಆಗಮನ
ಪ್ರಧಾನಿ ಮೋದಿ - ವಕುಮಾರ ಸ್ವಾಮೀಜಿ (ಸಂಗ್ರಹ ಚಿತ್ರ)
Published On :
ತುಮಕೂರು: ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಮಂಗಳವಾರ ತುಮಕೂರಿಗೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲುತ್ತಿದ್ದಾರೆ.
ಶ್ರೀಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಡಾ. ಶ್ರೀ ಶಿವಕುಮಾರಸ್ವಾಮೀಜಿಗಳು ಬಡವರು, ದೀನ ದಲಿತರು ಮತ್ತು ದುರ್ಬಲ ವರ್ಗಗಳ ಶಿಕ್ಷಣ ಮತ್ತು ಆರೋಗ್ಯ ಆರೈಕೆಗೆ ಮುಂಚೂಣಿಯಲ್ಲಿದ್ದ ಮಹಾ ಸಂತರು ಎಂದು ಗುಣಗಾನ ಮಾಡಿದ್ದಾರೆ.
ಸಮಾಜ ಸೇವೆ, ಆಧ್ಯಾತ್ಮಿಕ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸೌಲಭ್ಯ ವಂಚಿತರ ಹಕ್ಕುಗಳ ರಕ್ಷಣೆಗಾಗಿ ಉದ್ಧಾತ ಸೇವೆ ಸಲ್ಲಿಸುತ್ತಾ ನಮ್ಮ ಸಂಪ್ರದಾಯದ ಮೌಲ್ಯಗಳನ್ನು ಎತ್ತಿಹಿಡಿದ ಮಹಾಪುರುಷರು ಇವರು ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ನಾಳಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಇಂದು ಸಂಜೆ ವೇಳೆಗೆ ತುಮಕೂರಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ವಯೋಸಹಜ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಶಿವಕುಮಾರ ಸ್ವಾಮಿಜಿ ಅವರು ಇಂದು ಬೆಳಗ್ಗೆ 11.45ಕ್ಕೆ ಲಿಂಗೈಕ್ಯರಾಗಿದ್ದಾರೆ.
ನಾಳೆ ಸಂಜೆ 3.30ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4.30ರ ನಂತರ ಅಂತ್ಯ ಸಂಸ್ಕಾರ ನೆರವೇರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.