ದೇಶ

ಪಿಎನ್ ಬಿ ಬ್ಯಾಂಕ್, 2ಜಿ ಹಗರಣ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಗಳು ಸೇರಿ 20 ಮಂದಿ ವರ್ಗಾವಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ 2ಜಿ ಹಗರಣದ ತನಿಖೆ ನಡೆಸುತ್ತಿದ್ದ ಇಬ್ಬರು ಸೇರಿದಂತೆ ಒಟ್ಟು 20 ಸಿಐಬಿ ಆಧಿಕಾರಿಗಳನ್ನು ವರ್ಗಾಯಿಸಿ ಸಿಬಿಐ ಮಧ್ಯಂತರ .....

ಪಿಎನ್ ಬಿ ಬ್ಯಾಂಕ್, 2ಜಿ ಹಗರಣ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಗಳು ಸೇರಿ 20 ಮಂದಿ ವರ್ಗಾವಣೆ
ಸಿಬಿಐ ಕಚೇರಿ (ಸಂಗ್ರಹ ಚಿತ್ರ)
Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ 2ಜಿ ಹಗರಣದ ತನಿಖೆ ನಡೆಸುತ್ತಿದ್ದ ಇಬ್ಬರು ಸೇರಿದಂತೆ ಒಟ್ಟು 20 ಸಿಐಬಿ ಆಧಿಕಾರಿಗಳನ್ನು ವರ್ಗಾಯಿಸಿ ಸಿಬಿಐ ಮಧ್ಯಂತರ ನಿರ್ದೇಶಕ ಎಂ. ನಾಗೇಶ್ವರ ರಾವ್ ಆದೇಶ ಹೊರಡಿಸಿದ್ದಾರೆ,
ಜನವರಿ ಜನವರಿ 21 ರಂದು ಹೊರಡಿಸಿರುವ ಆದೇಶದಲ್ಲಿ ಬಹುಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ತನಿಖೆ ನಡೆಸುತ್ತಿದ್ದ ಎಸ್ ಕೆ ನಾಯರ್ ಹಾಗೂ 2ಜಿ ಸ್ಪೆಕ್ರ್ಟಂ ಹಗರಣದ ತನಿಖೆ ನಡೆಸುತ್ತಿದ್ದ ವಿವೇಕ್ ಪ್ರಿಯದರ್ಶಿನಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಹಿರಿಯ ಐಪಿಎಸ್‌ ಅಧಿಕಾರಿ ಎಂ.ನಾಗೇಶ್ವರ ರಾವ್‌ ಅವರನ್ನು ಸಿಬಿಐ ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿದ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಹಿಂದೆ ಸರಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.