ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಮಾವೇಶ: ಅನಾರೋಗ್ಯಕ್ಕೀಡಾದ ಅಮಿತ್ ಶಾ ಬದಲು ಸ್ಮೃತಿ ಇರಾನಿ ನೇತೃತ್ವ
ಇತ್ತೀಚೆಗಷ್ಟೇ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅಮಿತ್ ಶಾ ಜ.22 ರಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಬಿಜೆಪಿ ಸಮಾವೇಶ ಮುಕ್ತಾಯಗೊಳಿಸಿ ದೆಹಲಿಗೆ ಮರಳಿದ್ದಾರೆ.

Published On :
ಕೋಲ್ಕತ್ತಾ: ಇತ್ತೀಚೆಗಷ್ಟೇ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅಮಿತ್ ಶಾ ಜ.22 ರಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಬಿಜೆಪಿ ಸಮಾವೇಶ ಮುಕ್ತಾಯಗೊಳಿಸಿ ದೆಹಲಿಗೆ ಮರಳಿದ್ದಾರೆ.
ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಂತೆ ಅಮಿತ್ ಶಾ ಬಿರ್ಭಮ್, ಝಾರ್ಗ್ರಾಮ್, ನಾಡಿಯಾ ಮತ್ತು ದಕ್ಷಿಣ 24 ಪರ್ಗಾನಗಳಲ್ಲಿ ಸಾರ್ವಜನಿಕ ಸಮಾವೇಶಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಬದಲು ಸ್ಮೃತಿ ಇರಾನಿ ಸಮಾವೇಶಗಳಲ್ಲಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ.
ಈ ಬಗ್ಗೆ ಸ್ವತಃ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಮಾಹಿತಿ ನೀಡಿದ್ದು, ಬಿರ್ಭಮ್ ನಲ್ಲಿ ಸ್ಮೃತಿ ಇರಾನಿ ಸಮಾವೇಶದ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


