'ಇವಿಎಂ ಹ್ಯಾಕಿಂಗ್ ಸಾಧ್ಯ' ಎಂದ ಸೈಬರ್ ತಜ್ಞ ಸೈಯದ್ ವಿರುದ್ಧ ಎಫ್ಐಆರ್ ದಾಖಲು
2014ರ ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ದುರ್ಬಳಕೆಯಾಗಿತ್ತು ಮತ್ತು ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳಿದ್ದ ಸ್ವಯಂ...

Published On :
ನವದೆಹಲಿ: 2014ರ ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ದುರ್ಬಳಕೆಯಾಗಿತ್ತು ಮತ್ತು ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳಿದ್ದ ಸ್ವಯಂ ಘೋಷಿತ ಸೈಬರ್ ತಜ್ಞ ಸೈಯದ್ ಸೂಜಾ ವಿರುದ್ಧ ದೆಹಲಿ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ.
ಚುನಾವಣಾ ಆಯೋಗ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 505 ಅಡಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿನ್ನೆಯಷ್ಟೆ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದ ಕೇಂದ್ರ ಚುನಾವಣಾ ಆಯೋಗ, ಸೈಯದ್ ಸೂಜಾ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿತ್ತು.
ಸೈಯದ್ ಸೂಜಾ ಅವರು ಆತಂಕ ಸೃಷ್ಟಿಸುವ ವದಂತಿಗಳನ್ನು ಹರಡಲು ಯತ್ನಿಸುವ ಮೂಲಕ ಐಪಿಸಿ ಸೆಕ್ಷನ್ 505(1) ಅನ್ನು ಉಲ್ಲಂಘಿಸಿದ್ದಾರೆ ಎಂದು ಆಯೋಗ ಆರೋಪಿಸಿದೆ.
ಕಳೆದ ಸೋಮವಾರ ಸೈಯದ್ ಸೂಜಾ 'ಭಾರತದಲ್ಲಿ ಬಳಕೆ ಮಾಡುವ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು' ಎಂದು ಹೇಳಿದ್ದು, ಇದೊಂದು ದುರುದ್ದೇಶ ಪೂರಿತವಾದ ಆರೋಪವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಚುನಾವಣಾ ಆಯೋಗ ದೆಹಲಿ ಪೊಲೀಸರಿಗೆ ಕೇಳಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


