ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ; ಸಂಗ್ರಹಾಲಯ ಉದ್ಘಾಟನೆ; ರಾಷ್ಟ್ರಪತಿ, ಪ್ರಧಾನಿ ಸ್ಮರಣೆ
ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ...

ನವದೆಹಲಿ: ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿದರು.
ಸಂಗ್ರಹಾಲಯದ ಮಹತ್ವವನ್ನು ಸಾರಿದ ಪ್ರಧಾನಿ, ನಮ್ಮ ದೇಶದ ಸಂಪದ್ಭರಿತ ಐತಿಹಾಸಿಕ ಕ್ಷಣಗಳು ಮತ್ತು ನಮ್ಮ ಯುವಜನತೆಯ ನಡುವಿನ ಸಂಬಂಧವನ್ನು ಹೇಳಲಿದ್ದು ಪ್ರಜೆಗಳ ಮಧ್ಯೆ ದೇಶಭಕ್ತಿಯನ್ನು ಹೆಚ್ಚಿಸುತ್ತದೆ ಎಂದರು.
ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕುರಿತ ದೆಹಲಿಯ ಕೆಂಪು ಕೋಟೆಯಲ್ಲಿನ ಸಂಗ್ರಹಾಲಯಕ್ಕೆ ಕೂಡ ಪ್ರಧಾನಿ ಭೇಟಿ ನೀಡಿದರು.
ಇದಕ್ಕೂ ಮುನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸ್ವಾತಂತ್ರ್ಯ ಹೋರಾಟಗಾರ ನೇತಾಜಿಗೆ ಗೌರವ ನಮನ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


