ದೇಶ

ಬ್ಯಾಲಟ್ ಪೇಪರ್ ಯುಗಕ್ಕೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ: ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರ

2019 ರ ಲೋಕಸಭಾ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲಿಯೇ ನಡೆಸಬೇಕೆಂಬ ರಾಜಕೀಯ ಪಕ್ಷಗಳ ಒತ್ತಡದ ನಡುವೆಯೇ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬ್ಯಾಲಟ್ ಪೇಪರ್ ಯುಗಕ್ಕೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ:  ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರ
ಬ್ಯಾಲಟ್ ಪೇಪರ್ ಯುಗಕ್ಕೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ: ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ
Published On :
ನವದೆಹಲಿ: 2019 ರ  ಲೋಕಸಭಾ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲಿಯೇ ನಡೆಸಬೇಕೆಂಬ ರಾಜಕೀಯ ಪಕ್ಷಗಳ ಒತ್ತಡದ ನಡುವೆಯೇ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 
ಪುನಃ ಬ್ಯಾಲೆಟ್ ಪೇಪರ್ ಗಳಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿರುವ ಮುಖ್ಯ ಚುನಾವಣಾ ಆಯುಕ್ತರು, ಬ್ಯಾಲೆಟ್ ಪೇಪರ್ ಯುಗಕ್ಕೆ ವಾಪಸ್ ಹೋಗುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
"ಚುನಾವಣಾ ಆಯೋಗ ಇವಿಎಂ ಹಾಗೂ ವಿವಿಪ್ಯಾಟ್ ಗಳ ಬಳಕೆಯನ್ನು ಮುಂದುವರೆಸಲಿದೆ, ಯಾವುದೇ ರಾಜಕೀಯ ಪಕ್ಷ ಹಾಗೂ ಸಂಬಂಧಪಟ್ಟವರಿಂದ ಟೀಕೆ ಹಾಗೂ ಪ್ರತಿಕ್ರಿಯೆಗಳಿಗೆ ನಾವು ಮುಕ್ತವಾಗಿದ್ದೇವೆ ಎಂದು ಸುನಿಲ್ ಅರೋರಾ ಹೇಳಿದ್ದಾರೆ..
ಅಮೆರಿಕ ಮೂಲದ ಭಾರತೀಯ ಸೈಬರ್ ತಜ್ಞ 2014 ರ ಲೋಕಸಭಾ ಚುನಾವಣೆ ವೇಳೆ ಮತಯಂತ್ರ ತಿರುಚಲಾಗಿತ್ತು ಎಂಬ ಮಾಹಿತಿ ಬಹಿರಂಗಪಡಿಸಿದ ಬೆನ್ನಲ್ಲೇ 2019 ರ ಲೋಕಸಭಾ ಚುನಾವಣೆಯನ್ನು ಬ್ಯಾಲಟ್ ಪೇಪರ್ ನಲ್ಲಿ ನಡೆಸಲು ಬಿಎಸ್ ಪಿ, ಎಸ್ ಪಿ, ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆಗ್ರಹಿಸಿದ್ದವು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.