ಸಿಬಿಐ ಮಧ್ಯಂತರ ನಿರ್ದೇಶಕರ ನೇಮಕ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಿಕ್ರಿ
ಸಿಬಿಐಯ ಮಧ್ಯಂತರ ನಿರ್ದೇಶಕ ಎಂ ನಾಗೇಶ್ವರ ರಾವ್ ಅವರನ್ನು ನೇಮಿಸಿರುವ ಕೇಂದ್ರ ಸರ್ಕಾರದ ...

ನವದೆಹಲಿ: ಸಿಬಿಐಯ ಮಧ್ಯಂತರ ನಿರ್ದೇಶಕ ಎಂ ನಾಗೇಶ್ವರ ರಾವ್ ಅವರನ್ನು ನೇಮಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ ಕೆ ಸಿಕ್ರಿ ಹಿಂದೆ ಸರಿದಿದ್ದಾರೆ.
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಹುದ್ದೆಯಿಂದ ತೆಗೆದುಹಾಕಿರುವ ಉನ್ನತ ಮಟ್ಟದ ತಂಡದಲ್ಲಿ ನ್ಯಾಯಮೂರ್ತಿ ಸಿಕ್ರಿ ಕೂಡ ಇದ್ದರು.
ಇಂದು ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆ ಎನ್ ಜಿಒ ಕಾಮನ್ ಕಾಸ್ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ನ್ಯಾಯವಾದಿ ದುಶ್ಯಂತ್ ದಾವೆಗೆ ಈ ಪ್ರಕರಣದ ವಿಚಾರಣೆಯನ್ನು ನಡೆಸುವುದಿಲ್ಲ, ಇದರಿಂದ ಹಿಂದೆ ಸರಿಯುತ್ತೇನೆ, ನಿಮಗೆ ನನ್ನ ಪರಿಸ್ಥಿತಿ ಅರ್ಥವಾಗುತ್ತದೆ. ನಾನು ಇದರ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದರು.
ನಾಗೇಶ್ವರ್ ರಾವ್ ಅವರನ್ನು ಸಿಬಿಐ ಮಧ್ಯಂತರ ನಿರ್ದೇಶಕರಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯಿಂದ ಕಳೆದ ಸೋಮವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹಿಂದೆ ಸರಿದಿದ್ದರು.
ನ್ಯಾಯಮೂರ್ತಿ ಸಿಕ್ರಿಯವರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರೇತರ ಸಂಘಟನೆ ಪರ ವಕೀಲ ದುಶ್ಯಂತ್ ದಾವೆ ವಿಚಾರಣೆಯಿಂದ ಹಿಂದೆ ಸರಿಯುವುದಿದ್ದರೆ ಈ ಹಿಂದೆಯೇ ಹಿಂದೆ ಸರಿಯಬೇಕಾಗಿತ್ತು ಎಂದರು. ನ್ಯಾಯಮೂರ್ತಿ ಸಿಕ್ರಿಯವರು ಕೇಸಿನ ವಿಚಾರಣೆ ನಡೆಸಿದರೆ ತಮಗೆ ಯಾವುದೇ ಸಮಸ್ಯೆಯಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


