ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ: ವಿವರಣೆ ಕೋರಿ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್
ಸಾಮಾನ್ಯ ವರ್ಗಕ್ಕೆ ಸೇರಿದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 10 ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸ್ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿ....

Published On :
ನವದೆಹಲಿ: ಸಾಮಾನ್ಯ ವರ್ಗಕ್ಕೆ ಸೇರಿದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 10ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸ್ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಕೇಂದ್ರಕ್ಕೆ ನೋಟೀಸ್ ಜಾರಿಮಾಡಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠ ಶುಕ್ರವಾರ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋತೀಸ್ ಜಾರಿ ಮಾಡಿದೆ.
ಕೇಂದ್ರ ಜಾರಿಗೆ ತಂದಿರುವ ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನಿಯಮವು ಸಂವಿಧಾನ ತಿದ್ದುಪಡಿ ಕಾಯಿದೆ 103ರ ಸಿಂಧುತ್ವವನ್ನು ಪ್ರಶ್ನಿಸುವಂತಿದೆ ಎಂದು ವಿವಿಧ ಸಂಘಟನೆಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು.
"ನಾವು ಈ ವಿಚಾರವನ್ನು ಪರಿಶೀಲಿಸಲು ಒಪ್ಪಿಕೊಂಡಿದ್ದೇವೆ.ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋತೀಸ್ ನೀಡಿದ್ದು ಸರ್ಕಾರ ನಾಲ್ಕು ವಾರಗಳಲ್ಲಿ ಉತ್ತರಿಸಬೇಕು" ನ್ಯಾಯಪೀಠ ಹೇಳಿದೆ. ಆದರೆ ಕೇಂದ್ರದ ಮೀಸಲಾತಿ ನಿರ್ಧಾರಕ್ಕೆ ಕೋರ್ಟ್ ತಡೆ ನಿಡಲಿಲ್ಲ.
ಚುನಾವಣೆಗೆ ಇನ್ನೇನು ಕೆಲವೇ ತಿಂಗಳಿರುವಂತೆಯೇ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರವೌ ಸಾಮಾನ್ಯ ವರ್ಗದ ಬಡವರಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಖ್ಶಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕಾನೂನು ತಿದ್ದುಪಡಿಯನ್ನು ಜಾರಿಗೆ ತಂದಿದ್ದು ಬಡ ಮದ್ಯಮ ವರಗದ ಬಹುಮಂದಿಗೆ ಅನುಕೂಲಕರವಾಗಿ ಮಾರ್ಪಟ್ಟಿದೆ.
ಜನಹಿತ ಅಭಿಯಾನ್, ಯೂತ್ ಫಾರ್ ಈಕ್ವಾಲಿಟಿ ಸೇರಿ ನಾನಾ ಸಂಘಟನೆಗಳು ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
General Categoryಸಾಮಾನ್ಯ ವರ್ಗReservation quotaquota billಮೀಸಲಾತಿ ಮಸೂದೆeconomically weaker sectionsಮೀಸಲಾತಿ ಕೋಟಾಆರ್ಥಿಕ ದುರ್ಬಲ ವರ್ಗಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


