ಗಣರಾಜ್ಯೋತ್ಸವ ಸಂಭ್ರಮಾಚರಣೆ ನಡುವೆಯೇ ಕಣಿವೆಯಲ್ಲಿ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಸೇನೆ
ಇಡೀ ದೇಶವೇ 70ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿದ್ದರೆ ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕಿ ಕುಳಿತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆಯ ಸೈನಿಕರು ಹೊಡೆದುರುಳಿಸಿದ್ದಾರೆ.

Published On :
ಶ್ರೀನಗರ: ಇಡೀ ದೇಶವೇ 70ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿದ್ದರೆ ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕಿ ಕುಳಿತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆಯ ಸೈನಿಕರು ಹೊಡೆದುರುಳಿಸಿದ್ದಾರೆ.
ರಾಜಧಾನಿ ಶ್ರೀನಗರದ ಹೊರವಲಯದಲ್ಲಿರುವ ಖಾನ್ಮೊಹ್ ಪ್ರಾಂತ್ಯದ ಕಟ್ಟಡದೊಳಗೆ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ಪಡೆದ ಸೈನಿಕರು ಕೂಡಲೇ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸೈನಿಕರು ಕಟ್ಟಡವನ್ನು ಸುತ್ತುವರೆಯುತ್ತಿದ್ದಂತೆಯೇ ಸೈನಿಕರ ಮೇಲೆ ಉಗ್ರರು ಗುಂಡಿನ ಸುರಿಮಳೆ ಗರೆದಿದ್ದು, ಈ ವೇಳೆ 6 ಮಂದಿ ಸೈನಿಕರು ಗಾಯಗೊಂಡಿದ್ದಾರೆ. ಗಾಯಾಳು ಸೈನಿಕರನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಳಿಕ ಸೈನಿಕರೂ ಕೂಡ ಪ್ರತಿದಾಳಿ ನಡೆಸಿದ್ದು ಈ ವೇಳೆ ಕಟ್ಟಡದಲ್ಲಿದ್ದ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಘಟನಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಸೈನಿಕರು ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarterroristsಜಮ್ಮು ಮತ್ತು ಕಾಶ್ಮೀರJammu and Kashmirencounterಭಯೋತ್ಪಾದಕರುಭಾರತೀಯ ಸೇನೆಎನ್ಕೌಂಟರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


