ದೇಶ

ರಾಫೆಲ್ ಟ್ವೀಟ್ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪರಿಕ್ಕರ್-ರಾಹುಲ್ ಗಾಂಧಿ ಭೇಟಿ

ರಾಫೆಲ್ ಒಪ್ಪಂದದ ಕುರಿತು ಮನೋಹರ್ ಪರಿಕ್ಕರ್ ನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ನ್ನು ಭೇಟಿ ಮಾಡಿದ್ದಾರೆ.

ರಾಫೆಲ್ ಟ್ವೀಟ್ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪರಿಕ್ಕರ್-ರಾಹುಲ್ ಗಾಂಧಿ ಭೇಟಿ
ರಾಫೆಲ್ ಟ್ವೀಟ್ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪರಿಕ್ಕರ್-ರಾಹುಲ್ ಗಾಂಧಿ ಭೇಟಿ
Published On :
ಪಣಜಿ: ರಾಫೆಲ್ ಒಪ್ಪಂದದ ಕುರಿತು ಮನೋಹರ್ ಪರಿಕ್ಕರ್ ನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ನ್ನು ಭೇಟಿ ಮಾಡಿದ್ದಾರೆ.
ಮನೋಹರ್ ಪರಿಕ್ಕರ್ ಅವರು ಅನಾರೋಗ್ಯಕ್ಕೊಳಗಾಗಿದ್ದು ಹಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ಅವರನ್ನು ಪಣಜಿಯ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. 
ಇದೊಂದು ಸೌಜನ್ಯಯುತ  ಭೇಟಿ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ರಾಹುಲ್ ಪಣಜಿಗೆ ತೆರಳುವುದಕ್ಕೂ ಮುನ್ನ ರಾಫೆಲ್ ಒಪ್ಪಂದದ ಕುರಿತು ಟ್ವೀಟ್ ಮಾಡಿದ್ದರು. 
ಗೋವಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ " ರಾಫೆಲ್ ಕುರಿತು ಗೋವಾ ಆಡಿಯೋ ಟೇಪ್ ಗಳು ಬಿಡುಗಡೆಯಾಗಿ 30 ದಿನಗಳಾಯಿತು. ಆದರೆ ಈ ವರೆಗೂ ಎಫ್ಐಆರ್ ದಾಖಲಾಗಿಲ್ಲ, ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ. ಆಡಿಯೋ ಟೇಪ್ ಗಳು ಅಧಿಕೃತವಾದದ್ದಾಗಿದ್ದು, ಗೋವಾ ಸಿಎಂ ಮನೋಹರ್ ಪರಿಕ್ಕರ್ ರಾಫೆಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ" ಎಂದು ರಾಹುಲ್ ಟ್ವೀಟ್ ನಲ್ಲಿ ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.