ಪ್ರಯಾಗ್ ರಾಜ್ : ಕುಂಭ ಮೇಳದಲ್ಲಿ ಸಂಪುಟ ಸಭೆ,ವಿಶ್ವದ ಅತ್ಯಂತ ಉದ್ದದ ಎಕ್ಸ್ ಪ್ರೆಸ್ ವೇ ನಿರ್ಮಾಣ- ಯೋಗಿ
ಕುಂಭ ಮೇಳ ವೇದಿಕೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು

Published On :
ಪ್ರಯಾಗ್ ರಾಜ್ : ಕುಂಭ ಮೇಳ ವೇದಿಕೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು.
ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಲಖನೌ ಹೊರಗಡೆ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಹೆಚ್ಚಾಗಿ ಹಿಂದೂ ಧರ್ಮಿಯರು ಸೇರುವ ಕುಂಭ ಮೇಳಕ್ಕೆ ಮತ್ತಷ್ಟು ಹೆಸರು ತಂದುಕೊಡುವ ನಿಟ್ಟಿನಲ್ಲಿ ಸಂಪುಟ ಸಭೆ ನಡೆಸಲಾಗಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಪ್ರಯಾಗ್ ರಾಜ್ ಮತ್ತು ಪೂರ್ವ ಉತ್ತರ ಪ್ರದೇಶ ಸಂಪರ್ಕಿಸುವ ಗಂಗಾ ಎಕ್ಸ್ ಪ್ರೆಸ್ ವೇ ನಿರ್ಮಿಸಲು ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
600 ಕಿ. ಮೀ. ಉದ್ದದ ಈ ಹೆದ್ದಾರಿ ವಿಶ್ವದಲ್ಲಿಯೇ ಅತ್ಯಂತ ಉದ್ದವಾದ ಹೆದ್ದಾರಿಯಾಗಲಿದ್ದು, 6,556 ಹೆಕ್ಟರ್ ಭೂಮಿ ಸ್ವಾಧೀನಪಡಿನಪಡಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಸುಮಾರು 36 ಸಾವಿರ ಕೋಟಿ ರೂ.ಅಂದಾಜು ವೆಚ್ಚವಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
UPಸಂಪುಟ ಸಭೆYogi Adityanathಯೋಗಿ ಆದಿತ್ಯನಾಥ್cabinet meetಕುಂಭ ಮೇಳKumbh Melaಎಕ್ಸ್ ಪ್ರೆಸ್ ವೇPrayagrajExpressway ಉತ್ತರ ಪ್ರದೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


