ಅಯೋಧ್ಯೆ ವಿವಾದ: ಹೆಚ್ಚುವರಿ ಭೂಮಿ ಹಿಂದಿರುಗಿಸಲು ಅನುಮತಿ ಕೋರಿ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿ
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ವಿವಾದಿತ ರಾಮಜನ್ಮಭೂಮಿ - ಬಾಬ್ರಿ ಮಸೀದಿ ಭೂಮಿಯಲ್ಲಿ ತಾನು ಸ್ವಾಧೀನ ಪಡಿಸಿಕೊಂಡಿದ್ದ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲು ಅನುಮತಿ ನೀಡುವಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

Published On :
ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ವಿವಾದಿತ ರಾಮಜನ್ಮಭೂಮಿ - ಬಾಬ್ರಿ ಮಸೀದಿ ಭೂಮಿಯಲ್ಲಿ ತಾನು ಸ್ವಾಧೀನ ಪಡಿಸಿಕೊಂಡಿದ್ದ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲು ಅನುಮತಿ ನೀಡುವಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
1991ರಲ್ಲಿ ಸರ್ಕಾರ ಸ್ವಾಧೀನ ಪಡಿಸಿಕೊಂಡಿದ್ದ ಸುಮಾರು 2.77 ಎಕರೆ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಬೇಕೆಂದು ರಾಮಜನ್ಮಭೂಮಿ ಟ್ರಸ್ಟ್ ಕೋರಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹೆಚ್ಚುವರಿ ಭೂಮಿಯನ್ನು ವಿವಾದಿತ ನಿವೇಶನಕ್ಕೆ ಪ್ರವೇಶ ಮತ್ತು ನಿರ್ಗಮನ ದಾರಿ ನಿರ್ಮಿಸಲು ಬಳಸಲಾಗುತ್ತದೆ. ಮಾಲೀಕತ್ವ ದಾವೆಯನ್ನು ಯಾರೇ ಗೆದ್ದರೂ ವಿವಾದಿತ ನಿವೇಶನಕ್ಕೆ ಪ್ರವೇಶ ಮತ್ತು ನಿರ್ಗಮನ ಮಾರ್ಗ ನಿರ್ಮಾಣ ಅನಿವಾರ್ಯ ಎಂದೂ ಕೇಂದ್ರ ಸರ್ಕಾರ ಕೋರ್ಟ್ ಗೆ ತಿಳಿಸಿದೆ.
ಇದೇ ವೇಳೆ ಹೆಚ್ಚುವರಿ ಭೂಮಿಯನ್ನು ಕೇಂದ್ರ ಸರ್ಕಾರ ತನ್ನ ವಶದಲ್ಲಿ ಇಟ್ಟುಕೊಳ್ಳವುದರಿಂದ ಏನೂ ಪ್ರಯೋಜನವಿಲ್ಲ, ಆದ್ದರಿಂದ ಅದನ್ನು ಮೂಲ ಮಾಲೀಕರಿಗೆ ಹಿಂದಿರುಗಿಸುವುದೇ ಉತ್ತಮ ಎಂದು ಕೇಂದ್ರ ಸರಕಾರ ಕೋರ್ಟಿಗೆ ತಿಳಿಸಿದೆ.
ಇನ್ನು 2003ರಲ್ಲಿ ರಾಮ ಮಂದಿರಕ್ಕಾಗಿ ಅಯೋಧ್ಯೆಯಲ್ಲಿ ಶಿಲಾನ್ಯಾಸ ಪೂಜೆಗೆ ಅನುಮತಿ ನಿರಾಕರಿಸುವ ವೇಳೆ, ವಿವಾದಿತ ಭೂಮಿ ಹಾಗೂ ಸ್ವಾಧೀನ ಪಡಿಸಿಕೊಂಡ 67 ಎಕರೆ ಭೂಮಿಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. 67 ಎಕರೆಗೂ ಅಧಿಕ ಭೂಮಿಯಲ್ಲಿ ಬಹುಪಾಲನ್ನು ರಾಮಜನ್ಮಭೂಮಿ ಟ್ರಸ್ಟ್ ತನಗೆ ಸೇರಿದ್ದು ಎಂದು ವಾದಿಸಿತ್ತು. ಇದು ವಿವಾದ ರಹಿತ ಭೂಮಿಯಾಗಿದ್ದು, ಮೂಲ ಮಾಲೀಕರಿಗೆ ಬಿಟ್ಟುಕೊಡಬಹುದಾಗಿದೆ ಎಂದೂ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್Ram templeರಾಮ ಮಂದಿರಅಯೋಧ್ಯೆ ವಿವಾದAyodhya RowBhabri Masjid RowRam Temple Trustಬಾಬರಿ ಮಸೀದಿ ವಿವಾದರಾಮ್ ಮಂದಿರ ಟ್ರಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


