ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಮಕ್ಕಳ ಮೇಲೆ ಹಣ ಎಸೆದ ಮುಖ್ಯ ಪೊಲೀಸ್ ಪೇದೆ ಅಮಾನತು
70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಶಾಲಾ ಮಕ್ಕಳ ಮೇಲೆ ಹಣ ಎಸೆದ ಮುಖ್ಯ ಪೊಲೀಸ್ ಪೇದೆಯನ್ನು ಮಂಗಳವಾರ ಅಮಾನತು ಮಾಡಲಾಗಿದೆ.

Published On :
ನಾಗಪುರ್: 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಶಾಲಾ ಮಕ್ಕಳ ಮೇಲೆ ಹಣ ಎಸೆದ ಮುಖ್ಯ ಪೊಲೀಸ್ ಪೇದೆಯನ್ನು ಮಂಗಳವಾರ ಅಮಾನತು ಮಾಡಲಾಗಿದೆ.
ಮಹಾರಾಷ್ಟ್ರ ನಾಗಪುರದ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾನಮತ್ತ ಮುಖ್ಯ ಪೊಲೀಸ್ ಪೇದೆ ಪ್ರಮೋದ್ ವಲ್ಕೆ ಅವರು ಮಕ್ಕಳ ಮೇಲೆ ಹಣ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಹಿರಿಯ ಅಧಿಕಾರಿಗಳು, ವಿಡಿಯೋವನ್ನು ಪರಿಶೀಲಿಸಿ ಪ್ರಮೋದ್ ಅವರನ್ನು ಅಮಾನತುಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


