ದೇಶ

ಎಂ.ಜೆ.ಅಕ್ಬರ್ ಮಾನಹಾನಿ ಪ್ರಕರಣ: ಪ್ರಿಯಾ ರಮಣಿಗೆ ಸಮನ್ಸ್

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್, ಆರೋಪಿ, ಪತ್ರಕರ್ತೆ.....

ಎಂ.ಜೆ.ಅಕ್ಬರ್ ಮಾನಹಾನಿ ಪ್ರಕರಣ: ಪ್ರಿಯಾ ರಮಣಿಗೆ ಸಮನ್ಸ್
ಎಂ.ಜೆ.ಅಕ್ಬರ್ - ಪ್ರಿಯಾ ರಮಣಿ
Published On :
ನವದೆಹಲಿ: ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್, ಆರೋಪಿ, ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ಮಂಗಳವಾರ ಸಮನ್ಸ್  ಜಾರಿ ಮಾಡಿದೆ.
ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಪ್ರಿಯಾ ರಮಣಿ ಅವರ ವಿರುದ್ಧ ಅಕ್ಬರ್ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು, ಫೆಬ್ರವರಿ 25 ರಂದು ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತೆಗೆ ಸಮನ್ಸ್ ನೀಡಿದ್ದಾರೆ.
ರಮಣಿ ಅವರು 20 ವರ್ಷಗಳ ಹಿಂದೆ ಎಂ.ಜೆ.ಅಕ್ಬರ್ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಎಂ.ಜೆ. ಅಕ್ಬರ್ ಅವರು ಕಳೆದ ವರ್ಷ ಅಕ್ಟೋಬರ್ 17ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.