ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ: ರಾಹುಲ್ ಗಾಂಧಿ ಭರವಸೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ  ಮಹಿಳಾ ಮೀಸಲಾತಿ ಮಸೂದೆ ಜಾರಿಗೆ: ರಾಹುಲ್ ಗಾಂಧಿ ಭರವಸೆ
ರಾಹುಲ್ ಗಾಂಧಿ
Published On :

ಕೊಚ್ಚಿ:ಗ್ರಾಮೀಣ ಭಾಗದ ಜನರಿಗೆ ಕನಿಷ್ಠ ಆದಾಯ ಭದ್ರತೆಯ ಭರವಸೆ ನೀಡಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರಲಾಗುವುದು ಎಂದು ಮತ್ತೊಂದು ಭರವಸೆ ನೀಡಿದ್ದಾರೆ.

 ಮಹಿಳಾ  ಬೂತ್ ಮಟ್ಟದ ಅಧ್ಯಕ್ಷರ ಸಭೆಯಲ್ಲಿ  ಮಾತನಾಡಿದ ರಾಹುಲ್ ಗಾಂಧಿ, ಪ್ರತಿ ಚುನಾವಣೆಯಲ್ಲಿ ಹೆಚ್ಚಿನ ಯುವಕರು ಮತ್ತು ಮಹಿಳೆಯರು ಪಾಲ್ಗೊಳ್ಳಬೇಕು,ಮಹಿಳೆಯರು ನಾಯಕ ಸ್ಥಾನದಲ್ಲಿ ಇರುವುದನ್ನು ನೋಡಬಯಸುತ್ತೇವೆ. ಕೇರಳದ ನಾಯಕರು ಅತ್ಯಂತ ಸಮರ್ಥರು ಎಂಬುದು ನನಗೆ ಗೊತ್ತಿದೆ ಎಂದು ಹೇಳಿದರು.

ಇತ್ತೀಚಿಗೆ ಕಾಂಗ್ರೆಸ್ ಗೆಲುವು ಸಾಧಿಸಿದ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡಲಾಗಿದೆ.  ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನರೇಂದ್ರ ಮೋದಿ ಕಳೆದ ಐದು ವರ್ಷಗಳಲ್ಲಿ ರೈತರ ವಿರುದ್ಧ ಮಾಡಿರುವ ಎಲ್ಲಾ ಅನ್ಯಾಯಗಳನ್ನು ಸರಿಪಡಿಸಲಾಗುವುದು ಎಂದರು.

ನರೇಂದ್ರ ಮೋದಿ ಸುಳ್ಳಿನ ಮೇಲೆ ಸುಳ್ಳು ಹೇಳುತ್ತಾ ಐದು ವರ್ಷ ಕಾಲ ಹರಣ ಮಾಡಿದ್ದಾರೆ. ಯುವಕರಿಗೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ  ಮೋದಿ ತನ್ನ 15 ಸ್ನೇಹಿತರಿಗೆ ಕನಿಷ್ಠ ಆದಾಯದ ಭದ್ರತೆ ಸೌಲಭ್ಯ ಮಾಡಿಸಿಕೊಟ್ಟಿದ್ದಾರೆ. ನೀವುಗಳು ಕೂಡಾ ಅನಿಲ್ ಅಂಬಾನಿಯಾಗಿದ್ದರೆ ನಿಮ್ಮಗೂ ಕನಿಷ್ಠ ಆದಾಯ ಭದ್ರತೆ ಸೌಲಭ್ಯ ಒದಗಿಸುತ್ತಿದ್ದರು ಎಂದು ರಾಹುಲ್ ಗಾಂಧಿ ಆರೋಪಿಸಿದರು.
ದೇಶದ ಎಲ್ಲಾ ಪ್ರಜೆಗಳಿಗೂ ಕನಿಷ್ಠ ಆದಾಯ ಭದ್ರತೆ ಒದಗಿಸಲು ಚಿಂತನೆ ನಡೆಸಿರುವುದಾಗಿ  ರಾಹುಲ್ ಗಾಂಧಿ ಹೇಳಿದರು. ಸುಮಾರು 25 ಸಾವಿರ ಮಹಿಳಾ ಬೂತ್ ಮಟ್ಟದ ಅಧ್ಯಕ್ಷರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.