ದೇಶ

ಫೆಬ್ರವರಿ 1 ರಂದು ಕೇಂದ್ರ ಮಧ್ಯಂತರ ಬಜೆಟ್: ಪಿಯೂಷ್ ಗೋಯೆಲ್

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದೆ....

ಫೆಬ್ರವರಿ 1 ರಂದು ಕೇಂದ್ರ ಮಧ್ಯಂತರ ಬಜೆಟ್: ಪಿಯೂಷ್ ಗೋಯೆಲ್
ಪಿಯೂಷ್ ಗೋಯೆಲ್
Published On :
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಫೆಬ್ರವರಿ 1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಾಗುವುದು ಎಂದು ಸಚಿವ ಪಿಯೂಶ್ ಗೋಯೆಲ್ ಹೇಳಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪಿಯೂಷ್ ಗೋಯೆಲ್ , ಫೆಬ್ರವರಿ 1 ರಂದು ಬಜೆಟ್ ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯಲಿದ್ದು, ಫೆಬ್ರವರಿ 1 ರಂದು ಆಯವ್ಯಯ ಮಂಡನೆಯಾಗಲಿದೆ.
ಜನವರಿ 31 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ಈ ಮಧ್ಯಂತರ ಬಜೆಟ್​ನಲ್ಲಿ ಮೋದಿ ಸರ್ಕಾರ ನೌಕರರಿಗೆ ಹೆಚ್ಚಿನ ಪರಿಹಾರ ನೀಡುವ ನಿರೀಕ್ಷೆಯಿದೆ. ಆದಾಯ ತೆರಿಗೆ ಮಿತಿ ದ್ವಿಗುಣಗೊಳ್ಳುವ ಬಗ್ಗೆ ನಿರೀಕ್ಷಿಸಲಾಗಿದ್ದು, ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಮಿತಿಯನ್ನು ಸರ್ಕಾರ 5 ಲಕ್ಷ ರೂ. ಗೆ ಅಧಿಕಗೊಳಿಸಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.