ಲೋಕಸಭೆ ಚುನಾವಣೆ: ಎಐಎಡಿಎಂಕೆ ಟಿಕೆಟ್ ಗಾಗಿ ಅರ್ಜಿ ಆಹ್ವಾನ, ಅರ್ಜಿ ಬೆಲೆ 25 ಸಾವಿರ!
ತಮಿಳುನಾಡಿನ ಆಡಳಿತರೂಢ ಎಐಎಡಿಎಂಕೆ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಪಕ್ಷದ ಟಿಕೆಟ್ ಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Published On :
ಚೆನ್ನೈ: ತಮಿಳುನಾಡಿನ ಆಡಳಿತರೂಢ ಎಐಎಡಿಎಂಕೆ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಪಕ್ಷದ ಟಿಕೆಟ್ ಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆಯಿಂದ ಸ್ಪರ್ಧೆಸಲು ಬಯಸುವ ಪಕ್ಷದ ಕಾರ್ಯಕರ್ತರು 25 ಸಾವಿರ ರುಪಾಯಿ ನೀಡಿ ಅರ್ಜಿ ಸಲ್ಲಿಸಬೇಕು ಎಂದು ಎಐಎಡಿಎಂಕೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕರ್ತರು ಫೆಬ್ರವರಿ 4ರಿಂದ ಫೆಬ್ರವರಿ 10ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಎಐಎಡಿಎಂಕೆ ಸಂಚಾಲಕ, ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹಾಗೂ ಜಂಟಿ ಸಂಚಾಲಕ, ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ 39 ಲೋಕಸಭಾ ಕ್ಷೇತ್ರಗಳಿದ್ದು, ಪುದುಚೇರಿಯ 1 ಕ್ಷೇತ್ರ ಸೇರಿ ಒಟ್ಟು 40 ಸ್ಥಾನಗಳಲ್ಲಿ ಎಐಎಡಿಎಂಕೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆಯಿಂದ ಸ್ಪರ್ಧಿಸಿದ್ದ 40 ಅಭ್ಯರ್ಥಿಗಳ ಪೈಕಿ 37 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


