ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 4.78 ಲಕ್ಷಕ್ಕೂ ಹೆಚ್ಚಿನ ಮನೆಗಳ ಮಂಜೂರಾತಿ
ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ನಗರ ಪ್ರದೇಶದಲ್ಲಿನ ಬಡವರಿಗಾಗಿ ರಿಯಾಯಿತಿ ದರದಲ್ಲಿ 4 ಲಕ್ಷದ 78 ಸಾವಿರದ 670 ಮನೆಗಳನ್ನು ನಿರ್ಮಿಸಲು ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವಾಲಯ ಇಂದು ಅನುಮೋದನೆ ನೀಡಿದೆ.

ನವದೆಹಲಿ: ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ನಗರ ಪ್ರದೇಶದಲ್ಲಿನ ಬಡವರಿಗಾಗಿ ರಿಯಾಯಿತಿ ದರದಲ್ಲಿ 4 ಲಕ್ಷದ 78 ಸಾವಿರದ 670 ಮನೆಗಳನ್ನು ನಿರ್ಮಿಸಲು ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವಾಲಯ ಇಂದು ಅನುಮೋದನೆ ನೀಡಿದೆ.
ಕೇಂದ್ರಿಯ ಮಂಜೂರಾತಿ ಮತ್ತು ನಿರ್ವಹಣಾ ಸಮಿತಿಯ 42 ನೇ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದ್ದು, ಪ್ರಧಾನ ಮಂತ್ರಿ ನಗರ ಆವಾಸ್ ಯೋಜನೆಯಡಿ ಒಟ್ಟಾರೆಯಾಗಿ 7, 265, 763 ಮನೆಗಳನ್ನು ಮಂಜೂರು ಮಾಡಲಾಗಿದೆ.
ನೆರೆಯ ಆಂಧ್ರ ಪ್ರದೇಶಕ್ಕೆ 105, 956 ಮನೆಗಳು, ಪಶ್ಚಿಮ ಬಂಗಾಳಕ್ಕೆ 102,895, ಉತ್ತರ ಪ್ರದೇಶಕ್ಕೆ 91, 689, ತಮಿಳುನಾಡು 68,110, ಮಧ್ಯ ಪ್ರದೇಶ 35, 377, ಕೇರಳ 25, 059, ಮಹಾರಾಷ್ಟ್ರ 17, 817, ಒಡಿಶಾ 12, 290 ಬಿಹಾರ 10, 269 ಮತ್ತು ಉತ್ತರ ಖಂಡ್ ರಾಜ್ಯಕ್ಕೆ 9, 208 ಮನೆಗಳನ್ನು ಅನುಮೋದನೆ ನೀಡಲಾಗಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಟ್ಟಾರೇಯಾಗಿ 22, 492 ಕೋಟಿ ರೂ. ವೆಚ್ಚದಲ್ಲಿ 940 ಯೋಜನೆಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


