ದೇಶ

ನೋಟು ನಿಷೇಧದ ನಂತರ ಉದ್ಯೋಗಕ್ಕೂ ಬರ: ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ ಅತಿ ಹೆಚ್ಚು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಸರ್ಕಾರ ಗರಿಷ್ಠ ಮೌಲ್ಯದ ನೋಟುಗಳನ್ನು ನಿಷೇಧಿಸಿದ ನಂತರ ದೇಶದಲ್ಲಿ ನಿರುದ್ಯೋಗ...

ನೋಟು ನಿಷೇಧದ ನಂತರ ಉದ್ಯೋಗಕ್ಕೂ ಬರ: ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ ಅತಿ ಹೆಚ್ಚು
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಸರ್ಕಾರ ಗರಿಷ್ಠ ಮೌಲ್ಯದ ನೋಟುಗಳನ್ನು ನಿಷೇಧಿಸಿದ ನಂತರ ದೇಶದಲ್ಲಿ ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಿಗೆ ಅತಿ ಹೆಚ್ಚು ದಾಖಲಾಗಿದೆ.
2017-18ನೇ ಸಾಲಿನಲ್ಲಿ ನಿರುದ್ಯೋಗ ಪ್ರಮಾಣ ಶೇ.6.01ರಷ್ಟಿದ್ದು, ಇದು 45 ವರ್ಷಗಳಲ್ಲೇ ಅತಿ ಹೆಚ್ಚು ಎಂದು ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿ(ನ್ಯಾಷನಲ್ ಸ್ಯಾಂಪಲ್ ಸರ್ವೇ ಆಫೀಸ್) ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಬ್ಯುಸಿನೆಸ್​ ಸ್ಟಾಂಡರ್ಡ್​ ವರದಿ ಮಾಡಿದೆ.
2016ರಲ್ಲಿ ಪ್ರಧಾನಿ ಮೋದಿ ಅವರು 500 ಹಾಗೂ 1000 ರುಪಾಯಿ ಮುಖ ಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿ ಸರ್ಕಾರಿ ಸ್ವಾಮ್ಯದ ಸಂಸ್ಥೆ ನಡೆಸಿದ ಮೊದಲ ಸಮೀಕ್ಷೆ ಇದಾಗಿದೆ.
ಈ ವರದಿಯನ್ನು ಕಳೆದ ತಿಂಗಳೆ ಸಿದ್ದಪಡಿಸಲಾಗಿದ್ದು, ವರದಿಯನ್ನು ಸಾರ್ವಜನಿಕಪಡಿಸಿಲ್ಲ ಎಂಬ ಕಾರಣಕ್ಕೆ ಕಳೆದ ವಾರ ರಾಷ್ಟ್ರೀಯ ಸಂಖ್ಯಾಶಾಸ್ತ್ರ ಆಯೋಗದ  ಇಬ್ಬರು ಸ್ವತಂತ್ರ ಅಧಿಕಾರಿಗಳು ರಾಜೀನಾಮೆ ನೀಡಿದ್ದರು. ಆದರೂ ಕೂಡ ಈ ವರದಿ ಇನ್ನು ಬಹಿರಂಗವಾಗಿಲ್ಲ.
1972-73ರಲ್ಲಿ ನಿರುದ್ಯೋಗ ದರ ಹೆಚ್ಚಿತ್ತು ಆದಾದ ಬಳಿಕ ಈಗಲೇ ಇಷ್ಟು ಪ್ರಮಾಣದ ಸಂಖ್ಯೆ ಹೆಚ್ಚಿದೆ.  2011-12ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ನಿರುದ್ಯೋಗದ ಸಂಖ್ಯೆ ಕೇವಲ 2.2ರಷ್ಟು ಮಾತ್ರ ಇತ್ತು ಎನ್ನಲಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಹಾಗೂ ಒಟ್ಟಾರೆ ಜನಸಂಖ್ಯೆಗೆ ಹೋಲಿಸಿದರೆ, ಯುವಕರಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಾಗಿದೆ ಎಂದು ಸಮೀಕ್ಷೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.