ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿಗೆ ತಡೆ ನೀಡಲು ಸುಪ್ರೀಂ ನಕಾರ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ...

Published On :
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಮೇಲ್ವರ್ಗದವರಿಗೆ ಮೀಸಲಾತಿಗೆ ತಡೆ ಕೋರಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ಎ ಬೊಬ್ಡೆ ಹಾಗೂ ಬಿಆರ್ ಗವಾಯಿ ಅವರು, ಈ ಕುರಿತು ಸುದೀರ್ಘ ವಿಚಾರಣೆಯ ಅಗತ್ಯ ಇದೆ ಎಂದು ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿದ್ದಾರೆ.
ಶಿಕ್ಷಣ ಮತ್ತು ಉದ್ಯೋಗದಲ್ಲಿನ ಮೀಸಲಾತಿ ಪ್ರಮಾಣ ಶೇ.50% ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠ ಸ್ಪಷ್ಟವಾಗಿ ಹೇಳಿದೆ. ಕೇಂದ್ರ ಸರ್ಕಾರ ಈ ನಿರ್ಧಾರ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್refuses to stayತಡೆ ನೀಡಲು ನಕಾರಮೇಲ್ವರ್ಗದವರಿಗೆ ಮೀಸಲಾತಿreservation to EWS category
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


