ದೇಶ

ಮುಂಬೈನಲ್ಲಿ ವರುಣನ ಆರ್ಭಟ: ಮಲಾಡ್‌ನಲ್ಲಿ ಗೋಡೆ ಕುಸಿದು 13 ಮಂದಿ ಸಾವು

ಮಂಗಳವಾರ ನಸುಕಿನ ಜಾವ ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಲಾಡ್ ಪೂರ್ವ ಪ್ರದೇಶದ ಕುರಾರ್ ಪ್ರದೇಶದಲ್ಲಿ ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾದ ಗುಡಿಸಿಲುಗಳ ಮೇಲೆ ಗೋಡೆ ಕುಸಿದ ಕಾರಣ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.

ಮುಂಬೈನಲ್ಲಿ ವರುಣನ ಆರ್ಭಟ: ಮಲಾಡ್‌ನಲ್ಲಿ ಗೋಡೆ ಕುಸಿದು 13 ಮಂದಿ ಸಾವು
ಮುಂಬೈನಲ್ಲಿ ವರುಣನ ಆರ್ಭಟ: ಮಲಾಡ್‌ನಲ್ಲಿ ಗೋಡೆ ಕುಸಿದು 13 ಮಂದಿ ಸಾವು
Published On :
ಮಲಾಡ್(ಮಹಾರಾಷ್ಟ್ರ): ಮಂಗಳವಾರ ನಸುಕಿನ ಜಾವ ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಲಾಡ್ ಪೂರ್ವ ಪ್ರದೇಶದ ಕುರಾರ್ ಪ್ರದೇಶದಲ್ಲಿ ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾದ ಗುಡಿಸಿಲುಗಳ ಮೇಲೆ ಗೋಡೆ ಕುಸಿದ ಕಾರಣ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ  ಮತ್ತು ಎನ್‌ಡಿಆರ್‌ಎಫ್ ಆಗಮಿಸಿದ್ದು ಪರಿಹಾರ ಕಾರ್ಯ ನಡೆಸುತ್ತಿದೆ.  ಈವರೆಗೆ ನಾಲ್ಕು ಜನರನ್ನು ರಕ್ಷಿಸಿ ಶತಾಬ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
"ನಾಲ್ವರನ್ನು ರಕ್ಷಿಸಲಾಗಿದೆ. ಮತ್ತು ಶತಾಬ್ಡಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನಮ್ಮ ಸಂತಾಪವಿದೆ. ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತದೆ"  ಬಿಎಂಸಿ ತಿಳಿಸಿದೆ
ಭಾರೀ ಮಳೆಯಿಂದಾಗಿ ಗುಡಿಸಲುಗಳ ಮೇಲೆ ಕಂಪೌಂಡ್ ಗೋಡೆ ಕುಸಿದಿದೆ.ಇನ್ನೂ ಲವರು ಭಗ್ನಾವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಬಗೆಗೆ ಆತಂಕವಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.