ಬ್ಯಾಂಕ್ ಹಗರಣ: ಕೋಲಾರ ಸೇರಿದಂತೆ 12 ರಾಜ್ಯಗಳ 50 ಸ್ಥಳಗಳಲ್ಲಿ ಸಿಬಿಐ ದಾಳಿ
ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಮಂಗಳವಾರ ದಾಳಿ...

Published On :
ನವದೆಹಲಿ: ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಮಂಗಳವಾರ ದಾಳಿ ನಡೆಸಿದ್ದು, ಶೋಧ ಮುಂದುವರೆಸಿದೆ.
12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 18 ವಿವಿಧ ನಗರಗಳಲ್ಲಿ ಸಿಬಿಐ ಶೋಧ ನಡೆಯುತ್ತಿದೆ.
ದೆಹಲಿ, ಮುಂಬೈ, ಲೂಧಿಯಾನ, ಥಾಣೆ, ವಲ್ಸಾದ್, ಪುಣೆ, ಪಳನಿ, ಗಯಾ, ಗುರುಗ್ರಾಮ್, ಚಂಡೀಗಢ, ಭೋಪಾಲ್, ಸೂರತ್ ಮತ್ತು ಕರ್ನಾಟಕದ ಕೋಲಾರ ಸೇರಿದಂತೆ ವಿವಿಧ ನಗರಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಾಂಕ್ ವಂಚನೆಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳು, ಪ್ರವರ್ತಕರು ಮತ್ತು ಸಹವರ್ತಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಒಳಗೊಂಡಂತೆ ಆರೋಪಿಗಳ ವಿರುದ್ಧ ಸುಮಾರು 14 ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


