ಪುಣೆ: ಭಾರೀ ಮಳೆಯಿಂದ ಗೋಡೆ ಕುಸಿದು ಆರು ಕಾರ್ಮಿಕರು ದುರ್ಮರಣ
ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ 24 ಗಂಟೆಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾಪೌಂಡ್ ವೊಂದರ ಗೋಡೆ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

Published On :
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ 24 ಗಂಟೆಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾಪೌಂಡ್ ವೊಂದರ ಗೋಡೆ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಇಂದು ಬೆಳಗ್ಗೆ 1-15 ರ ಸುಮಾರಿನಲ್ಲಿ ಸಿಂಹಗಡ್ ಕಾಲೇಜಿನ ಕಾಂಪೌಂಡ್ ಗೋಡೆ ಕುಸಿದು ಈ ದುರಂತ ಸಂಭವಿಸಿದೆ.ಕೂಡಲೇ ಬಿಲ್ಡರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, 287 ಸೈಟ್ ಗಳ ಅಪಾಯದ ಮೌಲ್ಯಮಾಪನ ಮಾಡಲಾಗಿದೆ. ಆದರೆ, ಅನುಮತಿ ಪಡೆಯದ ಕಾರಣ ಈ ಸೈಟಿನ ಮೌಲ್ಯಮಾಪನ ಮಾಡಲು ಆಗುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎನ್ ಡಿಆರ್ ಎಫ್ ತಂಡದೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರು ಮೃತದೇಹಗಳನ್ನು ಎನ್ ಡಿಆರ್ ಎಫ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಮೃತರ ಹೆಸರು ದೃಢಪಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಕೊಂಡ್ವಾ ಗೋಡೆ ಕುಸಿತ ಸಂಭವಿಸಿದ ಎರಡು ದಿನಗಳ ನಂತರ ಮತ್ತೊಂದು ಗೋಡೆ ಕುಸಿತ ಪ್ರಕರಣವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಮುಂಬೈಯಲ್ಲಿ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ತುರ್ತು ಕಾರಣಕ್ಕೆ ಹೊರತುಪಡಿಸಿ ಉಳಿದ ವೇಳೆಯಲ್ಲಿ ಮನೆಯಿಂದ ಹೊರಬರದಂತೆ ಜನರಿಗೆ ಸಲಹೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


