2022ರೊಳಗೆ ಅಪೌಷ್ಠಿಕತೆ ಮುಕ್ತ ಭಾರತ- ಕೇಂದ್ರ ಸಚಿವೆ ಸ್ಮೃತಿ ಇರಾನಿ
2022 ರೊಳಗೆ ಭಾರತದಲ್ಲಿ ಅಪೌಷ್ಟಿಕತೆ ಮುಕ್ತ ಭಾರತವನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿಂದು ಹೇಳಿದರು.

Published On :
ನವದೆಹಲಿ:2022 ರೊಳಗೆ ಭಾರತದಲ್ಲಿ ಅಪೌಷ್ಟಿಕತೆ ಮುಕ್ತ ಭಾರತವನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿಂದು ಹೇಳಿದರು.
ಪೋಷಣಾ ಅಭಿಯಾನ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಯೋಜನೆಯಾಗಿದ್ದು, 2022ರೊಳಗೆ ಗುರಿಯನ್ನು ಭಾರತ ಸಾಧಿಸಲಿದೆ ಎಂದು ತಿಳಿಸಿದರು.
ಪೋಷಣಾ ಅಭಿಯಾನ ಯೋಜನೆ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಮುಂದಿನ ಎರಡು ವರ್ಷಗಳಲ್ಲಿ ದೇಶದಲ್ಲಿ ಯಾವುದೇ ಅಪೌಷ್ಠಿಕತೆ ಪ್ರಕರಣಗಳು ಇಲ್ಲದಂತಾಗುವುದು ಎಂದು ತಿಳಿಸಿದರು.
ಎಎಪಿ ಸದಸ್ಯ ಸುಶೀಲ್ ಕುಮಾರ್ ಗುಪ್ತಾ ಪ್ರಶ್ನೆಗೆ ಉತ್ತರಿಸಿದ ಸ್ಮೃತಿ ಇರಾನಿ, ಅಪೌಷ್ಠಿಕತೆ ಬಗ್ಗೆ ಮಾತನಾಡುವಾಗ ನೀರು, ನೈರ್ಮಲ್ಯ ಮತ್ತಿತರ ಅಂಶಗಳ ಬಗ್ಗೆ ಗಮನ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದರು.
ಕೇಂದ್ರಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಒತ್ತು ನೀಡಿದ್ದು,ಪ್ರತಿಯೊಬ್ಬ ಫಲಾನುಭವಿಗೂ ಪೌಷ್ಠಿಕ ಆಹಾರ ದೊರೆಯುವಂತೆ ಮಾಡಲಾಗಿದೆ. ಪೋಷಣಾ ಅಭಿಯಾನ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು, ಮಕ್ಕಳು, ಗರ್ಭೀಣಿಯರಿಗೆ ಪೌಷ್ಠಿಕ ಆಹಾರ ದೊರೆಯುವಂತೆ ಮಾಡಲಾಗಿದೆ ಎಂದು ಸ್ಮೃತಿ ಇರಾನಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiSmriti Iraniಸ್ಮೃತಿ ಇರಾನಿRajyasabhaರಾಜ್ಯಸಭೆMalnutrition-free India ನವ ದೆಹಲಿಅಪೌಷ್ಟಿಕತೆ ಮುಕ್ತ ಭಾರತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


