ಟ್ವಿಟರ್ ನಲ್ಲಿ 'ಕಾಂಗ್ರೆಸ್ ಅಧ್ಯಕ್ಷ' ಪದ ಅಳಿಸಿ ಹಾಕಿದ ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷದ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲ್ ಗಾಂಧಿ ತಮ್ಮ ಟ್ವಿಟರ್ ನಲ್ಲಿ ತಮ್ಮ ಅಧಿಕೃತ ಖಾತೆಯಲ್ಲಿ 'ಕಾಂಗ್ರೆಸ್ ಅಧ್ಯಕ್ಷ' ಪದಕೂಡ ಅಳಿಸಿ ಹಾಕಿದ್ದಾರೆ.

Published On :
ನವದೆಹಲಿ: ಕಾಂಗ್ರೆಸ್ ಪಕ್ಷದ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲ್ ಗಾಂಧಿ ತಮ್ಮ ನಿರ್ಧಾರಕ್ಕೆ ಕಟಿಬದ್ಧರಾಗಿದ್ದು, ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ ಟ್ವಿಟರ್ ನಲ್ಲಿ ತಮ್ಮ ಅಧಿಕೃತ ಖಾತೆಯಲ್ಲಿ 'ಕಾಂಗ್ರೆಸ್ ಅಧ್ಯಕ್ಷ' ಪದಕೂಡ ಅಳಿಸಿ ಹಾಕಿದ್ದಾರೆ.
ಇನ್ನುಮುಂದೆ ರಾಹುಲ್ ಅವರ ಟ್ವಿಟರ್ ಖಾತೆ ಅವರನ್ನು ಕಾಂಗ್ರೆಸ್ ಅಧ್ಯಕ್ಷರ ಬದಲಿಗೆ ಸಂಸದ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಎಂದಷ್ಟೇ ಪರಿಚಯಿಸುತ್ತದೆ. ಹೌದು.. ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಿಲ್ಲ. ಪಕ್ಷದ ಕಾರ್ಯಕಾರಿ ಸಮಿತಿ ಹೊಸ ಅಧ್ಯಕ್ಷರನ್ನು ನೇಮಿಸಬೇಕು ಎಂದು ಅಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ‘ಕಾಂಗ್ರೆಸ್ ಅಧ್ಯಕ್ಷ’ ಎಂಬ ಹುದ್ದೆಯನ್ನು ಬುಧವಾರ ತೆಗೆದುಹಾಕಿದ್ದಾರೆ.
ತಾವು ಇನ್ನು ಮುಂದೆ ಪಕ್ಷದ ಅಧ್ಯಕ್ಷನಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ ರಾಹುಲ್ ಗಾಂಧಿ, ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ನಡೆಸಿ ಪಕ್ಷದ ಹೊಸ ಅಧ್ಯಕ್ಷರನ್ನು ನಿರ್ಧರಿಸುವಂತೆ ಮನವಿ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಇನ್ನು ರಾಹುಲ್ ಗಾಂಧಿ ಮನವೊಲಿಕೆಗೆ ಯತ್ನಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೆಲ್ಲರೂ ವಿಫಲವಾಗಿದ್ದು, ನೂತನ ಅಧ್ಯಕ್ಷರ ನೇಮಕವಾಗುವವರೆಗೂ ಅವರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ತಿಳಿಸಿದೆ.
It is an honour for me to serve the Congress Party, whose values and ideals have served as the lifeblood of our beautiful nation.
I owe the country and my organisation a debt of tremendous gratitude and love.
Jai Hind
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


