ದೇಶ

ಗುಜರಾತ್ ನ ರಾಜ್ಯಸಭಾ ಸೀಟುಗಳಿಗೆ ಚುನಾವಣೆ: ಕಣದಲ್ಲಿ ಕೇಂದ್ರ ಸಚಿವ ಜೈಶಂಕರ್

ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಅವರು ಲೋಕಸಭೆ ಅಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಎರಡು ರಾಜ್ಯ.ಸಭೆ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.,..

Published On :
ಅಹಾಮದಾಬಾದ್: ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಅವರು ಲೋಕಸಭೆ ಅಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಎರಡು ರಾಜ್ಯ.ಸಭೆ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. 
ಗುಜರಾತ್‌ನ ಎರಡು ರಾಜ್ಯಸಭಾ ಸೀಟುಗಳ ಉಪಚುನಾವಣೆಗೆ ಇಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಗಾಂಧೀನಗರದಲ್ಲಿನ ರಾಜ್ಯ ವಿಧಾನಸಭಾ ಸಂಕೀರ್ಣದಲ್ಲಿ ಮತದಾನ ಆರಂಭಗೊಂಡಿದೆ. 
ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಬಿಜೆಪಿ  ವಿದೇಶ ವ್ಯವಹಾರ ಸಚಿವ ಎಸ್‌ ಜೈಶಂಕರ್‌ ಅವರನ್ನು ಮತ್ತು ಒಬಿಸಿ ನಾಯಕ ಜುಗಲಾಜಿ ಠಾಕೋರ್‌ ಅವರನ್ನು ಕಣಕ್ಕೆ ಇಳಿಸಿದೆ. ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಚಂದ್ರಿಕಾ ಚುಡಾಸಮಾ ಮತ್ತು ಗೌರವ್‌ ಪಾಂಡ್ಯ ಕಣದಲ್ಲಿದ್ದಾರೆ.
ಗುಜರಾತ್‌ನ ಈ ಎರಡು ರಾಜ್ಯಸಭಾ ಸ್ಥಾನಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳು ವಿಜಯಿಗಳಾಗಲು ಶೇ.50 ಮತ ಪಡೆಯಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.